ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್ ಶಾಸಕ ಎನ್.ರವಿಕುಮಾರ್ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.
ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ, ನೌಕರರ ಆತ್ಮಸ್ಥೈರ್ಯ ಕುಸಿಯುವಂತಾಗುತ್ತದೆ. ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಜಿಲ್ಲೆಯ ಅಭಿವೃದ್ದಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.
ರೈತ ಮುಖಂಡ ಬಸವರಾಜ ಇಂಗಿನ ಸಹ ಜಿಲ್ಲಾಧಿಕಾರಿ ವಿರುದ್ಧದ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.