ADVERTISEMENT

ವಿಧಾನ ಪರಿಷತ್: ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದರೆ ಉಚ್ಚಾಟನೆ- ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 7:12 IST
Last Updated 22 ನವೆಂಬರ್ 2021, 7:12 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್   

ಕಲಬುರಗಿ: 'ವಿಧಾನ ಪರಿಷತ್ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರವೇ ಬಿಡುಗಡೆ ಮಾಡುತ್ತೇವೆ. 20 ಕ್ಷೇತ್ರಗಳಲ್ಲಿಯೂ ನಮ್ಮ ಅಭ್ಯರ್ಥಿಗಳು ನಿಲ್ಲುತ್ತಾರೆ' ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

'ಯಾರಾದರೂ ಬಂಡಾಯ ಅಭ್ಯರ್ಥಿಗಳು ಸ್ಪರ್ಧೆ ಮಾಡಿದರೆಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುತ್ತೇವೆ' ಎಂದು ಅವರು ನಗರದಲ್ಲಿ ಸೋಮವಾರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

'ಗುತ್ತಿಗೆದಾರರಿಂದ ಪ್ರಧಾನಿ ಮೋದಿಗೆ ಪತ್ರ ಹೋದ ವಿಚಾರ ಗಂಭೀರವಾಗಿ ಪರಿಗಣಿಸುವಂಥದ್ದು.ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು. ನಾವು ಕೂಡ ರಾಜ್ಯಪಾಲರನ್ನು ಭೇಟಿ ಮಾಡುತ್ತೇವೆ' ಎಂದರು.

ADVERTISEMENT

'ಕಾಂಗ್ರೆಸ್ಸಿನಲ್ಲಿ ಯಾವುದೇ ಬಣಗಳಿಲ್ಲ. ಇರುವುದು ಕಾಂಗ್ರೆಸ್ ಒಂದೇ. ಬಿಜೆಪಿ ಮುಖಂಡರಿಗೆ ನಮ್ಮ ಬಗ್ಗೆ ಮಾತನಾಡದಿದ್ದರೆ ನಿದ್ದೆ ಬರುವುದಿಲ್ಲ. ಹೀಗಾಗಿ ಪ್ರತಿನಿತ್ಯ ನಮ್ಮ ಬಗ್ಗೆ ಅವರೇ ಪ್ರಚಾರ ಮಾಡುತ್ತಾರೆ' ಎಂದೂ ಲೇವಡಿ ಮಾಡಿದರು.

ಬೆಳೆ ಪರಿಹಾರ ನೀಡಿ:

'ಮಳೆಯಿಂದ ತತ್ತರಿಸಿದ ರೈತರು ಹಾಗೂ ಆಸ್ತಿಪಾಸ್ತಿ ಕಳೆದುಕೊಂಡವರಿಗೆ ಸರ್ಕಾರ ತಕ್ಷಣಪರಿಹಾರ ನೀಡಬೇಕು. ಬರೀ ಘೋಷಣೆ ಮಾಡಿದರೆ ಸಾಲದು,ಹಣ ಬಿಡುಗಡೆ ಮಾಡಬೇಕು' ಎಂದೂ ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.