ADVERTISEMENT

ಕಲಬುರಗಿ ಕಾಂಗ್ರೆಸ್ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 5:01 IST
Last Updated 28 ಜುಲೈ 2022, 5:01 IST
ಕಲಬುರಗಿಯ ಟೌನ್‌ಹಾಲ್ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆ ನಡೆಸಿದರು
ಕಲಬುರಗಿಯ ಟೌನ್‌ಹಾಲ್ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಮುಂಭಾಗ ಜಿಲ್ಲಾ ಕಾಂಗ್ರೆಸ್ ಮುಖಂಡರು ಮೌನ ಪ್ರತಿಭಟನೆ ನಡೆಸಿದರು   

ಕಲಬುರಗಿ: ಕೇಂದ್ರದ ಬಿಜೆಪಿ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಮುಖಂಡರು ನಗರದಲ್ಲಿ ಬುಧವಾರ ಮೌನ ಪ್ರತಿಭಟನೆ ನಡೆಸಿದರು.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಕರೆದಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಮೌನ ಪ್ರತಿಭಟನೆ ನಡೆಸುವಂತೆ ಕೆಪಿಸಿಸಿ ಕರೆ ನೀಡಿತ್ತು.

ಈ ಹಿನ್ನಲೆಯಲ್ಲಿ ಟೌನ್‌ಹಾಲ್ ಬಳಿಯ ಮಹಾತ್ಮ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಿದ ಅವರು, ‘ಜಾರಿ ನಿರ್ದೇಶನಾಲಯವು ರಾಜಕೀಯ ಪ್ರೇರಿತ ವಿಚಾರಣೆ ನಡೆಸಬಾರದು. ಸೋನಿಯಾ ಗಾಂಧಿ ಅವರಿಗೆ ತೊಂದರೆ ನೀಡಬಾರದು’ ಎಂದರು. ಕಾಂಗ್ರೆಸ್‌ನ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ತಿಪ್ಪಣ್ಣಪ್ಪ ಕಮಕನೂರು, ರಾಜಗೋಪಾಲರೆಡ್ಡಿ, ಸುಭಾಷ ಪಾಂಚಾಳ, ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೊನಗುಂಟಿ, ಈರಣ್ಣ ಝಳಕಿ, ಧರ್ಮರಾಜ ಬಿ.ಹೇರೂರ, ಪರಶುರಾಮ ನಾಟೇಕಾರ, ಕಾರ್ತಿಕ ನಾಟೇಕಾರ, ಶಫೀಕ್ ಹುಂಡೇಕಾರ, ಶಿವುಕುಮಾರ ಬಾಳಿ, ಲತಾ ರಾಠೋಡ, ರೇಣುಕಾ ಸಿಂಗೆ, ಶ್ವೇತಾ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.