ADVERTISEMENT

ಕಲಬುರಗಿ: ಪ್ರಿಯಾಂಕ್ ಖರ್ಗೆ ಆಪ್ತನಿಗೆ ವಿಧಾನಪರಿಷತ್ ಚುನಾವಣೆಗೆ ಟಿಕೆಟ್

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 15:23 IST
Last Updated 22 ನವೆಂಬರ್ 2021, 15:23 IST
ಶಿವಾನಂದ ಪಾಟೀಲ
ಶಿವಾನಂದ ಪಾಟೀಲ   

ಕಲಬುರಗಿ: ಕೆಪಿಸಿಸಿ ವಕ್ತಾರ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವಾನಂದ ಪಾಟೀಲ ಮರತೂರ ಅವರಿಗೆ ಕಲಬುರಗಿ–ಯಾದಗಿರಿ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್ ನೀಡಲಾಗಿದೆ.

ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಸ್ಪರ್ಧೆಗೆ ನಿರಾಕರಿಸಿದ್ದರು.

‘ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಕಾಂಗ್ರೆಸ್ ವರಿಷ್ಠರು ಟಿಕೆಟ್ ನೀಡಿದ್ದಾರೆ. ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಸಹಕಾರಿ ಚಳವಳಿಯಲ್ಲಿ ಮೊದಲಿನಿಂದಲೂ ಗುರುತಿಸಿಕೊಂಡಿದ್ದೇನೆ. ಹೀಗಾಗಿ ಪರಿಷತ್ ಚುನಾವಣೆಯಲ್ಲಿ ಗೆಲ್ಲಲು ಪಕ್ಷದ ಮುಖಂಡರು, ಕಾರ್ಯಕರ್ತರ ಸಹಯೋಗದಲ್ಲಿ ಶ್ರಮಿಸುತ್ತೇನೆ’ ಎಂದು ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.