ADVERTISEMENT

ಕಲಬುರಗಿ | ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆ: ಕಾಂಗ್ರೆಸ್ ಮೇಲುಗೈ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2025, 5:38 IST
Last Updated 20 ಆಗಸ್ಟ್ 2025, 5:38 IST
<div class="paragraphs"><p>ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ‌ ಗೆದ್ದ ಕಾಂಗ್ರೆಸ್ ‌ಬೆಂಬಲಿಗರು ಬುಧವಾರ ಸಂಭ್ರಮಾಚರಣೆ ನಡೆಸಿದರು.</p></div>

ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ‌ ಗೆದ್ದ ಕಾಂಗ್ರೆಸ್ ‌ಬೆಂಬಲಿಗರು ಬುಧವಾರ ಸಂಭ್ರಮಾಚರಣೆ ನಡೆಸಿದರು.

   

ಕಾಳಗಿ(ಕಲಬುರಗಿ ಜಿಲ್ಲೆ): ಇಲ್ಲಿನ ಪಟ್ಟಣ ಪಂಚಾಯಿತಿಗೆ ಇದೇ ಮೊದಲ ಬಾರಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಬುಧವಾರ ಪ್ರಕಟಗೊಂಡಿದ್ದು, ಕಾಂಗ್ರೆಸ್‌ ಸರಳ ಬಹುಮತ ಗಳಿಸಿದೆ.

ಒಟ್ಟು 11 ವಾರ್ಡ್‌ಗಳ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 6 ಅಭ್ಯರ್ಥಿಗಳು, ಬಿಜೆಪಿಯ 5 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ADVERTISEMENT

ಪಟ್ಟಣದಲ್ಲಿ ಸ್ಥಳೀಯವಾಗಿ ಒಟ್ಟು 8 ಸ್ಥಾನಗಳಲ್ಲಿ 6 ಕಾಂಗ್ರೆಸ್, 2 ಬಿಜೆಪಿ ಗೆದ್ದಿದೆ. ಆರು ತಾಂಡಾಗಳ 3 ಸ್ಥಾನಗಳಲ್ಲಿ 3 ಬಿಜೆಪಿ ಅಭ್ಯರ್ಥಿಗಳು ವಿಜೇತರಾಗಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ವಿಧಾನ‌ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ತವರು ಪಟ್ಟಣವಾದ ಕಾಳಗಿ ಪಟ್ಟಣದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದರೆ, ಕ್ಷೇತ್ರದ ಶಾಸಕ ಡಾ.ಅವಿನಾಶ ಜಾಧವ ತಾಂಡಾಗಳಲ್ಲಿ ತಮ್ಮ ಹಿಡಿತ ಸಾಧಿಸಿದಂತಾಗಿದೆ.

ಕಲಬುರಗಿ ಜಿಲ್ಲೆಯ ಕಾಳಗಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ‌ ಗೆದ್ದ ಬಿಜೆಪಿ ‌ಬೆಂಬಲಿಗರು ಬುಧವಾರ ಸಂಭ್ರಮಾಚರಣೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.