ಕಲಬುರಗಿ: ‘ಮುಡಾ ಪ್ರಕರಣದಲ್ಲಿ ಸಿಎಂ ಹೆಸರು ತಳಕು ಹಾಕಿ ಇಲ್ಲಸಲ್ಲದ ಆರೋಪ ಮಾಡುತ್ತಿರುವ ಬಿಜೆಪಿ–ಜೆಡಿಎಸ್ ಪಕ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ಮಾಡುತ್ತಿವೆ’ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಲತಾ ರಾಠೋಡ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಸಿಂಗೆ ಆರೋಪಿಸಿದರು.
ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಈಗಾಗಲೇ ತನಿಖೆಗೆ ಆದೇಶ ನೀಡಿದ್ದಾರೆ. ಈ ಪ್ರಕರಣಗಳಲ್ಲಿ ಮುಖ್ಯಮಂತ್ರಿ ಪಾತ್ರದ ಬಗ್ಗೆ ತನಿಖೆಯಿಂದ ತಿಳಿದುಬರಲಿದೆ. ಮುಡಾ ಕುರಿತು ಆರೋಪಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ದಾಖಲೆ ಸಹಿತ ಉತ್ತರ ನೀಡಿದ್ದಾರೆ’ ಎಂದರು.
‘ಮುಖ್ಯಮಂತ್ರಿ ಸಿದ್ದರಾಮನವರು 40 ವರ್ಷ ರಾಜಕೀಯದಲ್ಲಿ ಕಪ್ಪು ಚುಕ್ಕೆ ಬರದಂತೆ ಕೆಲಸ ಮಾಡಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಮುಂದಿನ ರಾಜಕೀಯ ಲಾಭ ಪಡೆಯಲು ಪಾದಯಾತ್ರೆ ಮಾಡುತ್ತಿವೆ’ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಚಂದ್ರಿಕಾ ಪರಮೇಶ್ವರಿ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.