ADVERTISEMENT

ಸಂವಿಧಾನ: ವಿಚಾರ ಸಂಕಿರಣ, ವಾಕಥಾನ್‌ 28ಕ್ಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 2:59 IST
Last Updated 24 ಜನವರಿ 2026, 2:59 IST
ಸಂವಿಧಾನವೇ ಬೆಳಕು
ಸಂವಿಧಾನವೇ ಬೆಳಕು   

ಕಲಬುರಗಿ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕಾ ಬಳಗವು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ‘ಸಂವಿಧಾನವೇ ಬೆಳಕು’ ಅಭಿಯಾನದಡಿ ನಗರದ ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಜನವರಿ 28ರಂದು ಬೆಳಿಗ್ಗೆ 7ರಿಂದ ಸಂವಿಧಾನ ಕುರಿತು ವಿಚಾರ ಸಂಕಿರಣ ಹಾಗೂ ವಾಕಥಾನ್‌ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಯುವ ಜನತೆಯಲ್ಲಿ ಸಂವಿಧಾನದ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ‘ಸಂವಿಧಾನವೇ ಬೆಳಕು’ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಗುಲಬರ್ಗಾ ವಿಶ್ವವಿದ್ಯಾಲಯದ ಅಂಬೇಡ್ಕರ್‌ ಭವನದಲ್ಲಿ ನಡೆಯುವ ವಿಚಾರ ಸಂಕಿರಣದಲ್ಲಿ ವಿಶೇಷ ಅತಿಥಿಯಾಗಿ ಕುಲಪತಿ ಪ್ರೊ. ಶಶಿಕಾಂತ ಎಸ್‌. ಉಡಿಕೇರಿ ಪಾಲ್ಗೊಳ್ಳಲಿದ್ದಾರೆ. ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್‌.ಟಿ .ಪೋತೆ ಅವರು ಸಂವಿಧಾನದ ಮಹತ್ವದ ಕುರಿತು ಉಪನ್ಯಾಸ ನೀಡಲಿದ್ದಾರೆ. ಬಳಿಕ ವಿಶ್ವವಿದ್ಯಾಲಯದ ಆವರಣದಲ್ಲಿ 3 ಕಿ.ಮೀ ವಾಕಥಾನ್‌ ನಡೆಯಲಿದೆ.

ಕಾರ್ಯಕ್ರಮಕ್ಕೆ ಉಚಿತ ಪ್ರವೇಶವಿದ್ದು, ವಿದ್ಯಾರ್ಥಿಗಳು ಕ್ಯೂಆರ್‌ ಕೋಡ್‌ ಸ್ಕ್ಯಾನ್‌ ಮಾಡುವ ಮೂಲಕ ಕಡ್ಡಾಯವಾಗಿ ಮೊದಲೇ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಗುಲಬರ್ಗಾ ವಿಶ್ವವಿದ್ಯಾಲಯದ ಸಂಯೋಜಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದಾಗಿದೆ. ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಟೀ–ಶರ್ಟ್‌ ಹಾಗೂ ಕ್ಯಾಪ್‌ಗಳನ್ನು  ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಮೊ: 9886336693 ಸಂಪರ್ಕಿಸಬಹುದು.

ADVERTISEMENT
ನೋಂದಣಿಗಾಗಿ ಸ್ಕ್ಯಾನ್‌ ಮಾಡಿ