ADVERTISEMENT

ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2020, 9:32 IST
Last Updated 16 ಆಗಸ್ಟ್ 2020, 9:32 IST
ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ
ಯಾದಗಿರಿ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ    

ಯಾದಗಿರಿ: ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅವರಿಗೆ ಭಾನುವಾರ ಕೋವಿಡ್ ದೃಢಪಟ್ಟಿದೆ.

ಶನಿವಾರ ಆರೋಗ್ಯದಲ್ಲಿ ಕೊಂಚ ಸಮಸ್ಯೆ ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಭಾನುವಾರ ಬೆಳಗ್ಗೆ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳುತ್ತಿದ್ದೇನೆ ಎಂದು ಶಾಸಕರು ಖಚಿತಪಡಿಸಿದ್ದಾರೆ.

ADVERTISEMENT

ಶನಿವಾರ ಜಿಲ್ಲಾಡಳಿತದಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಸಕರು ಪಾಲ್ಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಆತಂತ ಶುರುವಾಗಿದೆ.

ಅಲ್ಲದೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕರ ಸಂಪರ್ಕಕ್ಕೆ ಬಂದವರಲ್ಲಿ ಆತಂಕ ಮನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.