ಕಲಬುರ್ಗಿ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯನ್ನು ನವೆಂಬರ್ 10ಕ್ಕೆ ಮುಂದೂಡಲಾಗಿದೆ.
ನ.2ರಂದು ಮತ ಎಣಿಕೆ ನಿಗದಿಯಾಗಿತ್ತು. ಚುನಾವಣಾ ಆಯೋಗವು ನ.2ರ ಬದಲಾಗಿ ನ.10ರಂದು ಮತ ಎಣಿಕೆ ನಡೆಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿದೆಎಂದು ಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ ತಿಳಿಸಿದ್ದಾರೆ.
ನ.10ರಂದು ಬೆಳಿಗ್ಗೆ 8 ಗಂಟೆಯಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಗಣಿತ ವಿಭಾಗದ ಭಾಸ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.