ಕಲಬುರಗಿ: ‘ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಚಿತ್ರಮಂದಿರ, ಮಾಲ್ ಹಾಗೂ ಶಾಲಾ–ಕಾಲೇಜುಗಳನ್ನು ಬಂದ್ ಮಾಡಬೇಕು’ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಒತ್ತಾಯಿಸಿದ್ದಾರೆ.
ಈಗಾಗಲೇ ಕೋವಿಡ್ 3ನೇ ಅಲೆ ಪ್ರಾರಂಭವಾಗಿದೆ. ನೆರೆಯ ಮಹಾರಾಷ್ಟ್ರದಿಂದ ಜಿಲ್ಲೆಗೆ ನೂರಾರು ಜನ ಬರುತ್ತಿದ್ದಾರೆ. ಚಿತ್ರಮಂದಿರ ಹಾಗೂ ಮಾಲ್‌ಗಳಲ್ಲಿ ನಿಯಮಗಳು ಪಾಲನೆಯಾಗುತ್ತಿಲ್ಲ. ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಆದ್ದರಿಂದ ಚಿತ್ರಮಂದಿರ, ಮಾಲ್ ಹಾಗೂ ಶಾಲಾ–ಕಾಲೇಜುಗಳನ್ನು ಬಂದ್ ಮಾಡಬೇಕು ಎಂದು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.