ADVERTISEMENT

ಕೋವಿಡ್: ಇಬ್ಬರು ವೃದ್ಧರು ಸಾವು

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 2:06 IST
Last Updated 11 ಸೆಪ್ಟೆಂಬರ್ 2020, 2:06 IST

ಕಲಬುರ್ಗಿ: ಕೋವಿಡ್–19 ಸೋಂಕಿನಿಂದ ಜಿಲ್ಲೆಯಲ್ಲಿ ಇಬ್ಬರು ವೃದ್ಧರು ನಿಧನರಾಗಿರುವ ಬಗ್ಗೆ ಗುರುವಾರ ವರದಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 235ಕ್ಕೆ ಏರಿಕೆಯಾಗಿದೆ.

ತೀವ್ರ ಉಸಿರಾಟ ತೊಂದರೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ ಜೇವರ್ಗಿ ತಾಲ್ಲೂಕಿನ ಯಂಕಂಚಿ ಗ್ರಾಮದ 60 ವರ್ಷದ ವೃದ್ಧ ಸೆ 9ರಂದುಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯಿಂದ ಕಲಬುರ್ಗಿ ತಾಲ್ಲೂಕಿನ ಬಸನಾಳ ಗ್ರಾಮದ 60 ವರ್ಷದ ವೃದ್ಧ ಸೆ 9ರಂದುಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

243 ಪ್ರಕರಣ: ಗುರುವಾರ ಜಿಲ್ಲೆಯಲ್ಲಿ 243 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 13,734ಕ್ಕೆ ಏರಿಕೆಯಾಗಿದೆ. 234 ಜನ ಗುಣಮುಖರಾಗುವುದರೊಂದಿಗೆ ಒಟ್ಟಾರೆ 11,377 ಜನ ಸೋಂಕನ್ನು ಗೆದ್ದಂತಾಗಿದೆ. 2122 ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.