ADVERTISEMENT

ಗುಂಡಿಕ್ಕಿ ಗ್ರಾ.ಪಂ. ಮಾಜಿ ಸದಸ್ಯನ ಹತ್ಯೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 22:13 IST
Last Updated 13 ಸೆಪ್ಟೆಂಬರ್ 2024, 22:13 IST
ವಿಶ್ವನಾಥ ಜಮಾದಾರ
ವಿಶ್ವನಾಥ ಜಮಾದಾರ   

ಆಳಂದ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಖಾನಾಪುರ ಕ್ರಾಸ್‌ ಸಮೀಪದ ಆಳಂದ–ವಾಗ್ದರಿ ಮುಖ್ಯರಸ್ತೆ ಮೇಲೆ ಪಡಸಾವಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ವಿಶ್ವನಾಥ ಕಲ್ಯಾಣಿ ಜಮಾದಾರ (53) ಅವರನ್ನು ಶುಕ್ರವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಡಸಾವಳಿ ಗ್ರಾಮದ ನಿವಾಸಿಯಾಗಿರುವ ವಿಶ್ವನಾಥ ಬೆಳಿಗ್ಗೆ ಆಳಂದಕ್ಕೆ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದಾಗ ಬೈಕ್‌ ಮೇಲೆ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ವಿಶ್ವನಾಥ ಅವರಿಗೆ ಇಬ್ಬರು ಪತ್ನಿಯರು, ಪುತ್ರ ಹಾಗೂ ಪುತ್ರಿ ಇದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿವೈಎಸ್‌ಪಿ ಗೋಪಿ ಎ.ಆರ್., ಸಿಪಿಐ ಪ್ರಕಾಶ ಯಾತನೂರು, ಪಿಎಸ್‌ಐ ಭೀಮರಾವ ಬಂಕ್ಲಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.