ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷೆ, ದಂಡ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 3:12 IST
Last Updated 4 ಅಕ್ಟೋಬರ್ 2020, 3:12 IST

ಕಲಬುರ್ಗಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾದ್ದರಿಂದ ನಿಂಗಪ್ಪ ಶಿವಶರಣಪ್ಪ ಕೌಂಟಗಿ ಎಂಬಾತನಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು ಪೋಕ್ಸೊ ಅಡಿ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ.

2018ರ ಡಿಸೆಂಬರ್‌ 8ರಂದು ಅತ್ಯಾಚಾರ ಪ್ರಕರಣ ನಡೆದಿದೆ. ನಿಂಗಪ್ಪನ ಅಣ್ಣ ಅರ್ಜುನ ಇದಕ್ಕೆ ಕುಮ್ಮಕ್ಕು ನೀಡಿದ್ದಾನೆ. ಮಾರನೇ ದಿನ ನಿಂಗಪ್ಪ ಬಾಲಕಿಯನ್ನು ಕರೆದುಕೊಂಡು ಬೆಂಗಳೂರಿಗೆ ಪರಾರಿಯಾಗಿದ್ದ. ಅಲ್ಲಿ ಪರಿಚಯದವರ ರೂಮಿನಲ್ಲಿ ಹಾಗೂ ಶ್ರೀನಿವಾಸಪುರದ ಕೊತ್ತನೂರ ಎಂಬ ಪ್ರದೇಶದಲ್ಲಿ ತಗಡಿನ ಶೆಡ್ಡಿನಲ್ಲಿ ಒಂದು ತಿಂಗಳ ಕಾಲ ಬಾಲಕಿ ಜತೆಗೆ ಉಳಿದಿದ್ದ. ಆಗಲೂ ಅತ್ಯಾಚಾರ ಎಸಗಿದ್ದ.

ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಜೇವರ್ಗಿ ಸಿಪಿಐ ಡಿ.ಬಿ. ಪಾಟೀಲ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಗೋಪಾಲಪ್ಪ ಎಸ್‌. ಅವರು ತೀರ್ಪು ನೀಡಿದ್ದಾರೆ.

ADVERTISEMENT

ಬಾಲಕಿಗೆ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾರೆ. ಸರ್ಕಾರದ ಪರವಾಗಿ ಎಲ್‌.ವಿ. ಚಟ್ನಾಳಕರ್‌ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.