ಚಿಂಚೋಳಿ: ಶಹಾಬಾದ್ ಕಲ್ಲುಗಳ ಪಾಲಿಶಿಂಗ್ ಘಟಕದ ಎದುರು ನಿಲ್ಲಿಸಿದ ಟ್ರ್ಯಾಕ್ಟರ್ ಕಳವು ಮಾಡಲಾಗಿದೆ ಎಂದು ಟ್ರ್ಯಾಕ್ಟರ್ ಮಾಲೀಕ ನಾರಾಯಣ ಚಿಂಚೋಳಿ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಸುಮಾರು ₹ 6.50 ಲಕ್ಷ ಮೊತ್ತದ ಟ್ರ್ಯಾಕ್ಟರ್ ಟ್ರ್ಯಾಲಿ ಮತ್ತು ಎಂಜಿನ್ ಕಳುವಾಗಿವೆ ಎಂದು ನಾರಾಯಣ ತಿಳಿಸಿದ್ದಾರೆ. ಚಿಂಚೋಳಿ ಠಾಣೆಯಲ್ಲಿ ದೂರು ದಾಖಲಾಗಿದೆ. ಸಬ್ ಇನಸ್ಪೆಕ್ಟರ್ ರಾಜಶೇಖರ ರಾಠೋಡ ತನಿಖೆ ನಡೆಸುತ್ತಿದ್ದು, ಅನುಮಾನಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.