ಪ್ರಾತಿನಿಧಿಕ ಚಿತ್ರ
ಕಲಬುರಗಿ: ಮಗಳ ಮದುವೆಗೆ ಹಣ ಹೊಂದಿಸಲು ಸಾಧ್ಯವಾಗದೇ ಮನನೊಂದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರೊಬ್ಬರು ಸ್ನೇಹಿತನ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಶವಂತ ನಗರದ ನಿವಾಸಿ, ಛತ್ತೀಸಗಢದ ದಂತೇವಾಡದಲ್ಲಿ ಸಿಆರ್‌ಪಿಎಫ್ ಯೋಧನಾಗಿದ್ದ ತುಳಜಾರಾಮ ಸೂರ್ಯವಂಶಿ (51) ಮೃತರು. ಅವರಿಗೆ ಪತ್ನಿ, ಒಬ್ಬಳು ಪುತ್ರಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ಆರ್.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘19 ವರ್ಷದ ಮಗಳ ನಿಶ್ಚಿತಾರ್ಥ ಸಮಾರಂಭವು ಜುಲೈ ತಿಂಗಳಲ್ಲಿ ನಿಗದಿಯಾಗಿತ್ತು. ರಜೆಯ ಮೇಲೆ ಕಲಬುರಗಿಗೆ ಬಂದಿದ್ದ ತುಳಜಾರಾಮ ಅವರು ಸ್ನೇಹಿತ ಮಳೇಂದ್ರ ಕುಮಾರ ಅವರ ಮನೆಯ ಕೋಣೆಯಲ್ಲಿ ಉಳಿದುಕೊಂಡಿದ್ದರು. ಮಗಳ ಮದುವೆ ಶುಭ ಕಾರ್ಯಕ್ಕೆ ಹಣ ಹೊಂದಿಸಲು ಆಗದೆ ಕೋಣೆಯಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.