ಕಲಬುರ್ಗಿ: ‘ಕೊರೊನಾ ಸೋಂಕಿನ ನಿಖರ ತಪಾಸಣೆಗಾಗಿ ಸಿಟಿ ಸ್ಕ್ಯಾನ್ ಮಾಡಲು ತಜ್ಞರ ತಂಡ ಸಲಹೆ ನೀಡಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಈ ಸ್ಕ್ಯಾನ್‌ಗೆ ಅಧಿಕ ಶುಲ್ಕ ವಸೂಲಿ ಮಾಡುತ್ತಿರುವ ದೂರುಗಳು ಬಂದಿವೆ. ಇಂತಿಷ್ಟೇ ದರ ಪಡೆಯಬೇಕು ಎಂಬ ಬಗ್ಗೆ ಆದೇಶ ಹೊರಡಿಸಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಅಧಿಕ ಶುಲ್ಕ ಪಡೆಯುವಂತಿಲ್ಲ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.