ADVERTISEMENT

ಸಿಯುಕೆ: ಪಿಜಿ ಕೋರ್ಸ್‌ಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 14:17 IST
Last Updated 29 ಮಾರ್ಚ್ 2023, 14:17 IST
ಪ್ರೊ.ಬಟ್ಟು ಸತ್ಯನಾರಾಯಣ
ಪ್ರೊ.ಬಟ್ಟು ಸತ್ಯನಾರಾಯಣ   

ಕಲಬುರಗಿ: ‘ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ಬಿ.ಇಡಿ ಕೋರ್ಸ್ ಒಳಗೊಂಡಂತೆ 27 ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಎಇಟಿ–ಪಿಜಿ 2023) ಮೂಲಕ ಪ್ರವೇಶ ನೀಡುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಆಸಕ್ತರು ಏಪ್ರಿಲ್ 19ರೊಳಗೆ ವಿಶ್ವವಿದ್ಯಾಲಯದ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು’ ಎಂದು ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

‘ಪ್ರತಿ ಕೋರ್ಸ್‌ 40 ಸೀಟುಗಳನ್ನು ಒಳಗೊಂಡಿದ್ದು, ಪದವಿಯ ಅಂತಿಮ ಸೆಮಿಸ್ಟರ್‌ ಓದುತ್ತಿರುವ ವಿದ್ಯಾರ್ಥಿಗಳೂ ಸಹ ಆಸಕ್ತ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯು ಜೂನ್‌ 7ರಿಂದ 14ರವರೆಗೆ ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ’ ಎಂದು ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸಾಮಾನ್ಯ ಪ್ರವೇಶ ಪರೀಕ್ಷೆಯು ಕನ್ನಡ, ಇಂಗ್ಲಿಷ್‌, ಹಿಂದಿ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮಲಯಾಳಂ, ಮರಾಠಿ, ಒಡಿಯಾ, ಪಂಜಾಬಿ, ತಮಿಳು, ತೆಲುಗು ಮತ್ತು ಉರ್ದು ಸೇರಿ ಒಟ್ಟು 13 ಭಾಷೆಗಳಲ್ಲಿ ನಡೆಯಲಿದೆ’ ಎಂದು ಅವರು ವಿವರಿಸಿದರು.

ADVERTISEMENT

ಕೋರ್ಸ್‌ಗಳ ವಿವರ: ಎಂಎ (ಇಂಗ್ಲಿಷ್‌, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ). ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ (ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವವಿಜ್ಞಾನ), ಎಂ.ಟೆಕ್‌, ಎಲ್‌.ಎಲ್‌.ಎಂ, ಎಂ.ಪಿ.ಎ (ಹಿಂದೂಸ್ತಾನಿ ಗಾಯನ, ತಬಲಾ) ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಬಹುದು’ ಎಂದು ಅವರು ತಿಳಿಸಿದರು.

ಮಾಹಿತಿಗೆ ಸಂಪರ್ಕಿಸಬೇಕಾದ ವೆಬ್‌ಸೈಟ್ ವಿಳಾಸ: www.nta.ac.in ಮತ್ತು http://cuet.nta.nic.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.