ADVERTISEMENT

ಸಿಯುಕೆ: ಪಿಜಿ ಕೋರ್ಸ್‌ಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಜನವರಿ 2025, 6:45 IST
Last Updated 12 ಜನವರಿ 2025, 6:45 IST

ಕಲಬುರಗಿ: ಆಳಂದ ತಾಲ್ಲೂಕಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ (ಸಿಯುಕೆ) ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ–ಪಿಜಿ 2025) ಮೂಲಕ ಪ್ರವೇಶ ನೀಡುವ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಫೆ.1ರೊಳಗೆ ವಿಶ್ವವಿದ್ಯಾಲಯದ ಜಾಲತಾಣದ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ತಿಳಿಸಿದರು.

‘ಜನವರಿ 2ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿವೆ. https://exams.nta.ac.in/CUET-PG/ ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದು. ಫೆಬ್ರುವರಿ 3ರಿಂದ ಫೆ.5ರವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಮಾರ್ಚ್‌ 13ರಿಂದ 31ರವರೆಗೆ ವಿದೇಶದ 27 ಸೇರಿದಂತೆ ಒಟ್ಟು 312 ನಗರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (ಸಿಬಿಟಿ) ನಡೆಸಿ ಮೆರಿಟ್‌ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆ ಮಾಡಲಾಗುವುದು. ಭಾಷಾ ಪ್ರಶ್ನೆಪತ್ರಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಪ್ರವೇಶ ಪರೀಕ್ಷೆಗಳು ಇಂಗ್ಲಿಷ್‌ ಹಾಗೂ ಹಿಂದಿ ಭಾಷೆಯಲ್ಲಿರಲಿವೆ. ಕರ್ನಾಟಕದ 20 ನಗರಗಳಲ್ಲೂ ಸಿಬಿಟಿ ನಡೆಯಲಿದೆ’ ಎಂದರು.

ADVERTISEMENT

ಹೆಚ್ಚಿನ ಮಾಹಿತಿ ಪಡೆಯಲು www.nta.ac.in ಮತ್ತು https://exams.nta.ac.in/CUET-PG ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.