ADVERTISEMENT

ಜೇವರ್ಗಿ: ಆರ್‌ಎಸ್‌ಎಸ್‌ ನಿಷೇಧಕ್ಕೆ ಡಿಎಸ್‌ಎಸ್‌ ಆಗ್ರಹ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2025, 6:46 IST
Last Updated 11 ನವೆಂಬರ್ 2025, 6:46 IST
<div class="paragraphs"><p>ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಎದುರು ಆರ್‌ಎಸ್‌ಎಸ್‌ ನಿಷೇಧಿಸುವಂತೆ ಆಗ್ರಹಿಸಿ ಡಿಎಸ್‌ಎಸ್‌ ವತಿಯಿಂದ ಗ್ರೇಡ್‌-2 ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು</p></div>

ಜೇವರ್ಗಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಎದುರು ಆರ್‌ಎಸ್‌ಎಸ್‌ ನಿಷೇಧಿಸುವಂತೆ ಆಗ್ರಹಿಸಿ ಡಿಎಸ್‌ಎಸ್‌ ವತಿಯಿಂದ ಗ್ರೇಡ್‌-2 ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು

   

ಜೇವರ್ಗಿ: ದೇಶದಲ್ಲಿ ಕೋಮುಗಲಭೆ ಸೃಷ್ಟಿಸಿ, ಜನರನ್ನು ಧರ್ಮದ ಆಧಾರದ ಮೇಲೆ ವಿಭಜನೆ ಮಾಡಿ ಬ್ರಾಹ್ಮಣವಾದಿ ಅಧಿಕಾರವನ್ನು ನಿರಂತರವಾಗಿ ಅನುಭವಿಸಲು ಹೊರಟಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ನಿಷೇಧಿವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ಸೋಮವಾರ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಲಾಯಿತು.

ಈ ವಿಚಾರವಾಗಿ ಗ್ರೇಡ್-2 ತಹಶೀಲ್ದಾರ್ ಗೋಪಾಲ ಕಪೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ, ‘ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪಿಗೆ ಕಠಿಣ ಶಿಕ್ಷೆಗೊಳಪಡಿಸಿ ದೇಶದಿಂದ ಗಡಿಪಾರು ಮಾಡಬೇಕು. ಪ್ರಿಯಾಂಕ್ ಅವರಿಗೆ ಸರ್ಕಾರದಿಂದ ಝಡ್+ ಶ್ರೇಣಿ ಭದ್ರತೆ ಒದಗಿಸಬೇಕು ಹಾಗೂ ಅವರ ಕುಟುಂಬಕ್ಕೆ ಪದೇಪದೇ ಮಾನಸಿಕ ಹಿಂಸೆ, ಬೆದರಿಕೆ ಹಾಕುವವರ ವಿರುದ್ಧ ಸುಮೋಟೋ ಪ್ರಕರಣ ದಾಖಲು ಮಾಡಬೇಕು’ ಎಂದು ಮನವಿಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

‘ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರು ನಾಮಕರಣ ಮಾಡಬೇಕು, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಮೇಲೆ ಶೂ ಎಸೆದ ವಕೀಲರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಾಕಾರು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಸಂಘಟನೆಯ ಶ್ರೀಹರಿ ಕರಕಿಹಳ್ಳಿ, ಸುದ್ದು ಕೆರೂರ, ಜೈಭೀಮ ನರಿಬೋಳ, ರೇವಣಸಿದ್ದಪ್ಪ ಬಿರಾಳ, ಬಸವರಾಜ ವರ್ಚನಳ್ಳಿ, ಬೀರಲಿಂಗ ಕೆಲ್ಲೂರ, ಯಶವಂತ ಮಂದೇವಾಲ, ಶ್ರೀಮಂತ ಕೀಲೆದಾರ, ಶರಣಬಸಪ್ಪ ಲಖಣಾಪೂರ, ಸಾಯಬಣ್ಣ ಹರನಾಳ, ಲಕ್ಷ್ಮಣ ಡೊಳ್ಳೆ, ರಾಜು ಸರಕಾರ ಬಲರಾಮ ಹರನೂರ, ಶೇಖರ ಹಿಪ್ಪರಗಿ, ಭೀಮರಾಯ ಹರನಾಳ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.