ಕಲಬುರಗಿ: ಏಪ್ರಿಲ್ 2ರಂದು ದೇವರ ದಾಸಿಮಯ್ಯ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಬುಧವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಕಾರ್ಯಾಲಯದ ಚುನಾವಣೆಯ ಶಾಖೆಯ ತಹಶೀಲ್ದಾರ್ ಪಂಪಯ್ಯ, ‘ಏಪ್ರಿಲ್ 2ರಂದು ಬೆಳಿಗ್ಗೆ 11ಕ್ಕೆ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಒಬ್ಬ ನುರಿತ ಉಪನ್ಯಾಸಕರು ಮತ್ತು ಜಯಂತ್ಯುತ್ಸವ ಸಮಿತಿಯ ಅಧ್ಯಕ್ಷರ ಹೆಸರನ್ನು ಸೂಚಿಸಬೇಕು’ ಎಂದು ಸಮಾಜದ ಮುಖಂಡರಿಗೆ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು, ಡೊಳ್ಳು ಕುಣಿತ ಸೇರಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದರು.
ಸಮಾಜದ ಮುಖಂಡರು ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಸತೀಶಕುಮಾರ ಜಮಖಂಡಿ, ಬಸವರಾಜ ಕೆ. ಕರವಳ್ಳಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.