
ಪ್ರಜಾವಾಣಿ ವಿಶೇಷ
ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪುರದಲ್ಲಿ ಲಕ್ಷಾಂತರ ಭಕ್ತರ ಮಧ್ಯೆ ದತ್ತ ದೇವಸ್ಥಾನದಲ್ಲಿ ಗುರುವಾರ ಸಂಭ್ರಮದ ದತ್ತ ಮಹಾರಾಜರ ಜನ್ಮೋತ್ಸವ ಜರುಗಿತು. ದತ್ತ ಜನ್ಮೋತ್ಸವದ ನಿಮಿತ್ತ ದತ್ತ ಮೂರ್ತಿ ಹಾಗೂ ಪಾದುಕೆಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಕಾಕಡಾರತಿ ಮಾಡಲಾಯಿತು. ಮಧ್ಯಾಹ್ನ 12 ಗಂಟೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಾಜರನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಲಾಯಿತು. ದತ್ತ ಮಹಾರಾಜರ ಜನ್ಮೋತ್ಸವದ ನಿಮಿತ್ತ ಇಡೀ ದೇವಸ್ಥಾನವನ್ನು ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಭಕ್ತರು ತೊಟ್ಟಿಲು ಕಾರ್ಯಕ್ರಮದಲ್ಲಿ ಹೂ ಹಣ್ಣುಗಳನ್ನು ಅರ್ಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.