ಕಲಬುರಗಿ: ‘ರಂಗ ಸಂಗಮ ಕಲಾ ವೇದಿಕೆ ವತಿಯಿಂದ ನೀಡುವ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ಗದಗ ಮೂಲದ ವೃತ್ತಿ ರಂಗಭೂಮಿ ಕಲಾವಿದ ದಯಾನಂದ ಬೀಳಗಿ ಹಾಗೂ ಕೊಡಗು ಮೂಲದ ಹವ್ಯಾಸಿ ರಂಗಭೂಮಿ ನಟಿ ಗೀತಾ ಮೋಂಟಡ್ಕ ಅವರನ್ನು ಆಯ್ಕೆ ಮಾಡಲಾಗಿದೆ’ ಎಂದು ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷ ಎಲ್.ಬಿ. ಶೇಖ್ ಮಾಸ್ತರ್ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ವಿವಿಧ ಸ್ಥಳಗಳಿಂದ ಸುಮಾರು 45ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸಮಿತಿಯು ಪಾರದರ್ಶಕವಾಗಿ ಪ್ರಕ್ರಿಯೆ ಪೂರ್ಣಗೊಳಿಸಿ ಇಬ್ಬರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದರು.
‘ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಜುಲೈ 20ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯ್ಕೆಯಾದ ಕಲಾವಿದರಿಗೆ ₹10 ಸಾವಿರ ನಗದು ಹಾಗೂ ಫಲಕ ನೀಡಿ ಗೌರವಿಸಲಾಗುವುದು’ ಎಂದು ಹೇಳಿದರು.
‘ರಂಗಭೂಮಿಯನ್ನು ಉತ್ತೇಜಿಸುವ ದೃಷ್ಟಿಯಿಂದ ಸುಮಾರು 12 ವರ್ಷಗಳಿಂದ ರಂಗಭೂಮಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭದ ಅತಿಥಿಗಳ ಬಗ್ಗೆ ಬಳಿಕ ಮಾಹಿತಿ ನೀಡಲಾಗುವುದು’ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಸ್.ಎಚ್. ಬಸವಪ್ರಭು, ಬಿ.ಎಚ್. ನಿರಗುಡಿ, ವಿಶ್ವರಾಜ ಪಾಟೀಲ ಇತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.