ಕಲಬುರ್ಗಿ: ಕೋವಿಡ್ 19 ಸೋಂಕು ತಗುಲಿದ ವೃದ್ಧರಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಈ ಸೋಂಕಿನಿಂದ ತೀರಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ‘ಡೈಲಿ ಹಂಟ್ ಉರ್ದು ನ್ಯೂಸ್’ ಜಾಲತಾಣದ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶರತ್ ಬಿ. ಅವರು ಪೊಲೀಸ್ ಕಮಿಷನರ್ ಎಂ.ಎನ್.ನಾಗರಾಜ ಅವರಿಗೆ ಮಂಗಳವಾರ ಲಿಖಿತ ದೂರು ನೀಡಿದ್ದಾರೆ.
ಈ ಸುಳ್ಳು ಸುದ್ದಿಯಿಂದಾಗಿ ನಾಗರಿಕರಲ್ಲಿ ಭಯ ಹಾಗೂ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ ಎಂದೂ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.