ADVERTISEMENT

ಕಲಬುರ್ಗಿ: ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 4:15 IST
Last Updated 20 ಮಾರ್ಚ್ 2021, 4:15 IST
ವಿ.ವಿ.ಜ್ಯೋತ್ಸ್ನಾ
ವಿ.ವಿ.ಜ್ಯೋತ್ಸ್ನಾ   

ಕಲಬುರ್ಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಕಾರಣ ಮಾರ್ಚ್ 20ರಂದು ನಡೆಯಬೇಕಿದ್ದ ‘ಜಿಲ್ಲಾಧಿಕಾರಿಗಳ ನಡೆ– ಹಳ್ಳಿಯ ಕಡೆ’ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಡಿ.ಸಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ಮಹಾರಾಷ್ಟ್ರದ ಗಡಿಗೆ ಹೊಂದಿ ಕೊಂಡಿರುವ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಮುಂಜಾಗ್ರತವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು‌ ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT