ADVERTISEMENT

ಕಲಬುರ್ಗಿ | ವಲಸಿಗರಿಗೆ ಊಟ, ನೀರು, ಶೌಚಾಲಯ ವ್ಯವಸ್ಥೆ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 9 ಮೇ 2020, 9:41 IST
Last Updated 9 ಮೇ 2020, 9:41 IST
ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ವಾಗ್ಧರಿಯಲ್ಲಿ ಶುಕ್ರವಾರ ಕಾರ್ಮಿಕರನ್ನು ಸಂಸದ ಡಾ.ಉಮೇಶ ಜಾಧವ ಹಾಗೂ ಜಿಲ್ಲಾಧಿಕಾರಿ ಬಿ.ಶರತ್‌ ಶುಕ್ರವಾರ ಭೇಟಿಯಾದರು
ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡ ವಾಗ್ಧರಿಯಲ್ಲಿ ಶುಕ್ರವಾರ ಕಾರ್ಮಿಕರನ್ನು ಸಂಸದ ಡಾ.ಉಮೇಶ ಜಾಧವ ಹಾಗೂ ಜಿಲ್ಲಾಧಿಕಾರಿ ಬಿ.ಶರತ್‌ ಶುಕ್ರವಾರ ಭೇಟಿಯಾದರು   

ಕಲಬುರ್ಗಿ: ‘ವಲಸೆ ಕಾರ್ಮಿಕರಿಗೆ ಗಡಿಯ ಚೆಕ್‌ಪೋಸ್ಟ್‌ಗಳಲ್ಲಿ 24 ಗಂಟೆಯೂ ಊಟದ ವ್ಯವಸ್ಥೆ ಇರಲಿದೆ. ಕುಡಿಯುವ ನೀರು, ಪೊಲೀಸ್ ಭದ್ರತೆ, ಬೆಳಕಿನ ವ್ಯವಸ್ಥೆಗೆ ಜನರೇಟರ್, ಆಂಬುಲೆನ್ಸ್‌ ಸೇರಿದಂತೆ ಎಲ್ಲ ಅಗತ್ಯ ಸೌಕರ್ಯ ಕಲ್ಪಿಸಲಾಗುವುದು’ ಎಂದು ಜಿಲ್ಲಾಧಿಕಾರಿ ಬಿ.ಶರತ್‌ ತಿಳಿಸಿದ್ದಾರೆ.

ಕರ್ನಾಟಕ– ಮಹಾರಾಷ್ಟ್ರದ ಗಡಿಭಾಗದ ವಾಗ್ಧರಿ ಚೆಕ್‌ಪೋಸ್ಟ್‌ಗೆ ಶುಕ್ರವಾರ ಭೇಟಿ ನೀಡಿದ ಅವರು, ‘ಎಲ್ಲರಿಗೂ ಮಾಸ್ಕ್, ಹ್ಯಾಂಡ್ ಸ್ಯಾನಿಟೈಸರ್ ವಿತರಿಸಬೇಕು.ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಹಾಗೂ ಭದ್ರತೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ತಹಶೀಲ್ದಾರ್‌ ದಯಾನಂದ ಪಾಟೀಲ ಅವರಿಗೆ ಸೂಚನೆ ನೀಡಿದರು.‌

‘ಸುಮಾರು 10 ಸಾವಿರ ಜನ ನೆರೆಯ ಮಹಾರಾಷ್ಟ್ರದಿಂದ ಬರುವ ಸಾಧ್ಯತೆ ಇದೆ. ಕಾರ್ಮಿಕರು ಊರಿಗೆ ಮರಳಿದ ನಂತರ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಬೇಕು. ಪುನರ್ವಸತಿ ವ್ಯವಸ್ಥೆ ಕಲ್ಪಿಸಬೇಕು’ ಎಂದು ಸೂಚನೆ ನೀಡಿದರು.

ADVERTISEMENT

‘ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಯ ಕಾರ್ಮಿಕರನ್ನುಶುಕ್ರವಾರ ಜಿಲ್ಲೆಯ ಒಳಗೆ ಕರೆತರಲಾಗುವುದು. ಅವರು ಸೇವಾ ಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಿ ಬಂದವರಲ್ಲ. ಲಾಕ್‌ಡೌನ್ ವೇಳೆ ಗಡಿ ಬಳಿ ಬಂದಿದ್ದಾರೆ. ಹೀಗಾಗಿ ಪ್ರತಿಯೊಬ್ಬರ ಮಾಹಿತಿ ಸಂಗ್ರಹ ಅವಶ್ಯ. ಇದಕ್ಕಾಗಿ 15 ಕೌಂಟರ್ ತೆರೆಯಬೇಕು. ಎಲ್ಲರ ಆರೋಗ್ಯ ತಪಾಸಣೆ ಕಡ್ಡಾಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.