ADVERTISEMENT

ಮತಗಟ್ಟೆ ಪರಿಶೀಲಿಸಿದ ಕಲಬುರಗಿ ಜಿಲ್ಲಾಧಿಕಾರಿ ತರನ್ನುಮ್‌

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2024, 16:07 IST
Last Updated 18 ಮಾರ್ಚ್ 2024, 16:07 IST
ಅಫಜಲಪುರ ತಾಲ್ಲೂಕಿನ ಮದರಾ(ಬಿ) ಗ್ರಾಮದಲ್ಲಿ ಸೋಮವಾರ ಜಿಲ್ಲಾಧಿಕಾರಿಯವರು ಲೋಕಸಭೆ ಚುನಾವಣೆಯ ನಿಮಿತ್ಯವಾಗಿ ಮತಗಟ್ಟೆಗಳನ್ನ ಪರಿಶೀಲನೆ ಮಾಡಿದರು
ಅಫಜಲಪುರ ತಾಲ್ಲೂಕಿನ ಮದರಾ(ಬಿ) ಗ್ರಾಮದಲ್ಲಿ ಸೋಮವಾರ ಜಿಲ್ಲಾಧಿಕಾರಿಯವರು ಲೋಕಸಭೆ ಚುನಾವಣೆಯ ನಿಮಿತ್ಯವಾಗಿ ಮತಗಟ್ಟೆಗಳನ್ನ ಪರಿಶೀಲನೆ ಮಾಡಿದರು   

ಅಫಜಲಪುರ: ಲೋಕಸಭೆ ಚುನಾವಣೆ ನಿಮಿತ್ತ ಸೋಮವಾರ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯಿತಿ ಸಿಇಒ ಭಂವರ್‌ ಸಿಂಗ್ ಮೀನಾ ಅವರು ತಾಲ್ಲೂಕಿನ ದೇವಲಗಾಣಗಾಪುರ, ಮದರಾ(ಬಿ) ಮತಗಟ್ಟೆಗಳಿಗೆ ಭೇಟಿ ನೀಡಿ, ಪರಿಶೀಲನೆ ಮಾಡಿದರು.

ತಾಲ್ಲೂಕು ಚುನಾವಣೆ ಅಧಿಕಾರಿ ಹಾಗೂ ತಹಶೀಲ್ದಾರ್‌ ಸಂಜುಕುಮಾರ ದಾಸರ ಅವರು, ಮತಗಟ್ಟೆ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದರು. ಪಿಡಿಒಗಳು ಹಾಗೂ ಸಿಬ್ಬಂದಿ ಮತ್ತಿತರರು ಪಾಲ್ಗೊಂಡಿದ್ದರು.

ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಮತ್ತು ಆಲಮಟ್ಟಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಪಟ್ಟಣದಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡುತ್ತಾರೆ ಎಂದು ಮಾಹಿತಿ ಬಂದಿತ್ತು. ಆದರೆ ಜಿಲ್ಲಾಧಿಕಾರಿಗಳ ಭೇಟಿ ಕೊನೆಗಳಿಗೆಯಲ್ಲಿ ರದ್ದಾಯಿತು ಎಂದು ತಿಳಿದು ಬಂದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.