ADVERTISEMENT

ಚಿತ್ತಾಪುರ: ಬಸವ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ

ತಹಶೀಲ್ದಾರ್ ನಾಗಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2025, 16:08 IST
Last Updated 21 ಏಪ್ರಿಲ್ 2025, 16:08 IST
ಚಿತ್ತಾಪುರ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ತಹಶೀಲ್ದಾರ್ ನಾಗಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ಬಸವ ಜಯಂತಿಯ ಪೂರ್ವಸಿದ್ಧತಾ ಸಭೆ ಜರುಗಿತು
ಚಿತ್ತಾಪುರ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ತಹಶೀಲ್ದಾರ್ ನಾಗಯ್ಯ ಹಿರೇಮಠ ಅಧ್ಯಕ್ಷತೆಯಲ್ಲಿ ಬಸವ ಜಯಂತಿಯ ಪೂರ್ವಸಿದ್ಧತಾ ಸಭೆ ಜರುಗಿತು    

ಚಿತ್ತಾಪುರ: ಸಾಮಾಜಿಕ ಕ್ರಾಂತಿಯ ಹರಿಕಾರ, ರಾಜ್ಯದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತಿಯನ್ನು ಏ.30ರಂದು ತಾಲ್ಲೂಕು ಆಡಳಿತದಿಂದ ಹಾಗೂ ವೀರಶೈವ ಲಿಂಗಾಯತ ಸಮಾಜದ ಸಹಯೋಗದಲ್ಲಿ ಸರ್ಕಾರದ ಶಿಷ್ಟಾಚಾರದಂತೆ ಸಂಭ್ರಮದಿಂದ ಆಚರಣೆ ಮಾಡಲಾಗುವುದು ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂದು ಬೆಳಗ್ಗೆ 8ಗಂಟೆಗೆ ತಹಶೀಲ್ದಾರ್ ಕಚೇರಿಯಲ್ಲಿ ಬಸವೇಶ್ವರರ ಭಾವಚಿತ್ರದ ಪೂಜೆ ನೆರವೇರಿಸಲಾಗುವುದು. ನಂತರ ಭಾವಚಿತ್ರದ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವ್ಯವಸ್ಥೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಆಗಮಿಸಿದ ಜನರಿಗೆ ಉಪಹಾರದ ವ್ಯವಸ್ಥೆ ಮಾಡಿಸುತ್ತೇವೆ ಎಂದು ಅವರು ಹೇಳಿದರು.

ವೀರಶೈವ ಲಿಂಗಾಯತ ಸಮಾಜದ ಮುಖಂಡ ಸೋಮಶೇಖರ ಪಾಟೀಲ್, ಮುಖಂಡ ಅನಿಲ್ ವಡ್ಡಡಗಿ ಮಾತನಾಡಿದರು. ಮೆರವಣಿಗೆಯಲ್ಲಿ ರೈತರ 50 ಜೋಡು ಎತ್ತುಗಳನ್ನು ವಿಶೇಷವಾಗಿ ಅಲಂಕರಿಸಿ ತರಲಾಗುವುದು. ಮೆರವಣಿಗೆಯಲ್ಲಿ ಹಲಿಗೆ, ಡೊಳ್ಳು ವ್ಯವಸ್ಥೆ ಮಾಡಿಸಬೇಕು ಎಂದು ಅವರು ಹೇಳಿದರು.

ADVERTISEMENT

ಸಭೆಯಲ್ಲಿ ಗ್ರೇಡ್-2 ತಹಶೀಲ್ದಾರ್ ರಾಜಕುಮಾರ ಮರತೂರಕರ್, ತಾ.ಪಂ. ಇಒ ಮೊಹ್ಮದ್ ಅಕ್ರಂ ಪಾಷಾ, ಸಹಾಯಕ ಕೃಷಿ ನಿರ್ದೇಶಕ ಸಂಜೀವ ಮಾನಕರ್, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ರಮೇಶ ಪಾಟೀಲ್ ಮರಗೋಳ, ಚಂದ್ರಶೇಖರ ಅವಂಟಿ, ಶಾಂತಣ್ಣ ಚಾಳಿಕರ್‌, ರವೀಂದ್ರ ಸಜ್ಜನಶೆಟ್ಟಿ, ಬಸವರಾಜ ಪಾಟೀಲ್ ಬೆಳಗುಂಪಾ, ಓಂಕಾರ ರೇಷ್ಮಿ, ಆನಂದ ಪಾಟೀಲ್ ನರಬೋಳ, ನಾಗರಾಜ ರೇಷ್ಮಿ, ರಮೇಶ ಬಮ್ಮನಳ್ಳಿ, ಬಸವರಾಜ ಹೂಗಾರ, ನಾಗರಾಜ ಹೂಗಾರ, ಚಂದ್ರಶೇಖರ ಉಟಗೂರ, ರಮೇಶ ಕಾಳನೂರು, ಶಿವರಾಜ ಪಾಳೇದ್, ಮಹಾಂತಗೌಡ ಪಾಟೀಲ್, ಬಸವರಾಜ ಸಂಕನೂರು, ಮಲ್ಲಿಕಾರ್ಜುನರೆಡ್ಡಿ ಇಜಾರ್ ಅನೇಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.