ADVERTISEMENT

ದೈಹಿಕ ಶಿಕ್ಷಣ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 7:23 IST
Last Updated 30 ಡಿಸೆಂಬರ್ 2025, 7:23 IST
   

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಆದರ್ಶ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮಹಾದೇವ ಅವರು ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ತೋರುತ್ತಿದ್ದು, ಅವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಭಾರತ ಮುಕ್ತಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾರುತಿ ಗಂಜಗಿರಿ ಒತ್ತಾಯಿಸಿದ್ದಾರೆ.

ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ‘ಮಹಾದೇವ ಅವರು ತಮ್ಮ ಮನಬಂದಂತೆ ವರ್ತಿಸುತ್ತಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅವರನ್ನು ತಕ್ಷಣ ಚಿಂಚೋಳಿ ತಾಲ್ಲೂಕಿನಿಂದ ಬೇರೆಡೆ ವರ್ಗಾವಣೆ ಮಾಡಬೇಕು. ಆರೋಪಗಳ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ತಪ್ಪಿದಲ್ಲಿ ಚಿಂಚೋಳಿಯಿಂದ ಕಲಬುರಗಿಯವರೆಗೆ ಪಾದಯಾತ್ರೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT