ADVERTISEMENT

ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 14:12 IST
Last Updated 19 ಡಿಸೆಂಬರ್ 2018, 14:12 IST
ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಿದರು
ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಿದರು   

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಭಾಗದಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಅಹಿಂದ ಚಿಂತಕರ ವೇದಿಕೆ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಪ್ರದರ್ಶನ ನಡೆಸಿದರು.

ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಎಚ್‌ಕೆಆರ್‌ಡಿಬಿ)ಗೆ ನಿಗದಿಪಡಿಸಿರುವ ಸಂಪೂರ್ಣ ಅನುದಾನವನ್ನು ಬಿಡುಗಡೆ ಮಾಡಬೇಕು. 2014–15ರಲ್ಲಿ ಕಲಬುರ್ಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ₹400 ಕೋಟಿ ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರತಿ ವರ್ಷ ನಿಗದಿಯಾದ ಅನುದಾನಕ್ಕೆ ತಕ್ಕಂತೆ ಕ್ರಿಯಾಯೋಜನೆ ಸಿದ್ಧಪಡಿಸಬೇಕು ಎಂದು ಆಗ್ರಹಿಸಿದರು.

ಸಂಸ್ಥಾಪಕ ಅಧ್ಯಕ್ಷ ಸಾಯಬಣ್ಣ ಜಮಾದಾರ, ರಾಜ್ಯ ಘಟಕದ ಉಪಾಧ್ಯಕ್ಷ ರಾಚಣ್ಣ ಯಡ್ರಾಮಿ, ಕಾರ್ಯದರ್ಶಿ ರಮೇಶ ಹಡಪದ, ಖಜಾಂಚಿ ಸಂಜು ಎಲ್.ಹೊಡಲಕರ್, ಅಧ್ಯಕ್ಷ ಇಸ್ಮಾಯಿಲ್ ಮಾಲಗತ್ತಿ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.