ಪ್ರಾತಿನಿಧಿಕ ಚಿತ್ರ
ಕಲಬುರಗಿ: ‘ರಾಜ್ಯದಲ್ಲಿ ನ್ಯಾ.ನಾಗಮೋಹನದಾಸ್ ವರದಿ ಅನುಸಾರ ಒಳ ಮೀಸಲಾತಿ ಜಾರಿ ಮಾಡುವಾಗ ಭೋವಿ ಸಮುದಾಯಕ್ಕೆ ಶೇ 2.5ರಷ್ಟು ಪ್ರತ್ಯೇಕ ಮೀಸಲು ನೀಡಬೇಕು’ ಎಂದು ಕಲ್ಯಾಣ ಕರ್ನಾಟಕ ವಡ್ಡರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ತಿಪ್ಪಣ್ಣ ಒಡೆಯರಾಜ್ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 2011ರ ಜನಗಣತಿ ಪ್ರಕಾರ ಭೋವಿ ಸಮುದಾಯದ ಜನಸಖಖ್ಯೆ 11.19 ಲಕ್ಷ ಇತ್ತು. ಇದೀಗ 14 ವರ್ಷ ದಾಟಿದರೂ ಕೇವಲ 10 ಸಾವಿರ ಹೆಚ್ಚಿಗೆ ತೋರಿಸಲಾಗಿದೆ. ಹೀಗಾಗಿ ಸಮೀಕ್ಷೆಯಲ್ಲಿ ಸಮುದಾಯದ ವಾಸ್ತ ಸಂಖ್ಯೆ ನಿರ್ದಿಷ್ಟವಾಗಿ ತೋರಿಸಿಲ್ಲ’ ಎಂದು ಆರೋಪಿಸಿದರು.
‘ರಾಜ್ಯದಲ್ಲಿ 5 ಲಕ್ಷ ಜನಸಂಖ್ಯೆ ಹೊಂದಿರುವ ಆದಿ ಆಂಧ್ರ, ಆದಿ ಕರ್ನಾಟಕ, ಆದಿ ದ್ರಾವಿಡ ಸಮುದಾಯಕ್ಕೆ ಶೇ 1ರಷ್ಟು ಮೀಸಲಾತಿಗೆ ಶಿಫಾರಸು ಮಾಡಲಾಗಿದೆ ಎನ್ನಲಾಗುತ್ತಿದೆ. ಜನಸಂಖ್ಯೆ ಆಧಾರದಲ್ಲಿ ನಮ್ಮು ಸಮುದಾಯಕ್ಕೂ ಪ್ರತ್ಯೇಕ ಗುಂಪು ಮಾಡಿ ಶೇ 2.5ರಷ್ಟು ಮೀಸಲಾತಿ ನೀಡಬೇಕು’ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಮುಖಂಡರಾದ ಶ್ರೀಹರಿಜಾದ, ರಾಮಯ್ಯ ಪೂಜಾರಿ, ಹಣಮಂತ ಜಾಧವ, ಅರ್ಜುನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.