ಚಿಂಚೋಳಿ: ‘ಬೀದರ್ ಜಿಲ್ಲೆಯ ಚಿಟಗುಪ್ಪದ ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ್ ಸುಭಾಷ ನಿಡಗುಂದಿ ಅವರನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದವರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿ ತಾಲ್ಲೂಕು ವೀರಶೈವ ಲಿಂಗಾಯತ ನೌಕರರ ಸಂಘ ಹಾಗೂ ವೀರಶೈವ ಲಿಂಗಾಯತ ಮಹಾಸಭೆ ಪ್ರಮುಖರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಚಿಟಗುಪ್ಪ ತಹಶೀಲ್ದಾರ್ ಕಚೇರಿಯ ಗ್ರೇಡ್-2 ತಹಶೀಲ್ದಾರ್ ಹಾಗೂ ಅವರ ಪತಿ ಸೇರಿಕೊಂಡು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಶಿರಸ್ತೆದಾರ್ ಸುಭಾಷ ಅವರನ್ನು ಒತ್ತಾಯ ಪೂರ್ವಕವಾಗಿ ಬಸ್ಸಿನಿಂದ ಇಳಿಸಿಕೊಂಡು ತಮ್ಮ ಕಾರಿನಲ್ಲಿ ಕೂಡಿಸಿಕೊಂಡು ಅಪಹರಿಸಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಅತ್ಯಂತ ಅಮಾನವೀಯವಾಗಿದೆ. ಘಟನೆಗೆ ಕಾರಣವಾಗಿರುವ ಗ್ರೇಡ್-2 ತಹಶೀಲ್ದಾರ್ ಅವರನ್ನು ಸೇವೆಯಿಂದ ವಜಾಗೊಳಿಸಬೇಕು ಮತ್ತು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಶರಣು ಪಾಟೀಲ, ಮಲ್ಲಿಕಾರ್ಜುನ ಪಾಲಾಮೂರ, ರಾಜಶೇಖರ ಹಿತ್ತಲ್, ಶಿವಪ್ರಸಾದ ಪಿ.ಜಿ, ರಾಜಶೇಖರ ಮುಸ್ತಾರಿ, ಮಕ್ಸೂದ್ ಅಲಿ, ಭೀಮರಾವ್ ಹೂಗಾರ, ಹಾಶಪ್ಪ ಪೂಜಾರಿ, ಮಡಿವಾಳಪ್ಪ ರಗಟೆ ಹಾಗೂ ವಿಜಯಕುಮಾರ ಸೇರಿದಂತೆ ಎರಡು ಸಂಘಟನೆಗಳ ಪದಾಧಿಕಾರಿಗಳು, ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.