ಕಲಬುರಗಿ: ‘ಕರ್ನಾಟಕ ಮಾಲಿ, ಮಾಲಗಾರ ಹಾಗೂ ಹೂಗಾರ ಅಭಿವೃದ್ಧಿ ನಿಗಮಕ್ಕೆ ₹100 ಕೋಟಿ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿ ಅಖಂಡ ಕರ್ನಾಟಕ ಹೂಗಾರ ಮಹಾಸಭಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸೋಮವಾರ ಮನವಿ ಸಲ್ಲಿಸಿದರು.
‘2023ರಲ್ಲಿಯೇ ನಿಗಮ ಸ್ಥಾಪಿಸಲಾಗಿದೆ. ಆದರೆ, ಇದುವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಅಧಿವೇಶನದಲ್ಲಿ ತೀರ್ಮಾನಿಸಿ ನಿಗಮಕ್ಕೆ ₹100 ಕೋಟಿ ಅನುದಾನ ನೀಡಬೇಕು. ನಿಗಮಕ್ಕೆ ಸಮಾಜದವರನ್ನೇ ಅಧ್ಯಕ್ಷರನ್ನಾಗಿ ನೇಮಿಸಬೇಕು’ ಎಂದು ಆಗ್ರಹಿಸಿದರು.
‘ಬೇಡಿಕೆ ಈಡೇರಿಸದಿದ್ದಲ್ಲಿ ಜುಲೈ 25ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು’ ಎಂದು ತಿಳಿಸಿದರು.
ಸಂಘದ ರಾಜ್ಯ ಗೌರವಾಧ್ಯಕ್ಷ ಗುರುದೇವ ಶರಣ, ಜಿಲ್ಲಾ ಗೌರವಾಧ್ಯಕ್ಷ ಬಿ.ಪಿ.ಹೂಗಾರ, ಜಿಲ್ಲಾಧ್ಯಕ್ಷ ಪ್ರಕಾಶ ಜಿ.ಫು ಲಾರಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹೂಗಾರ, ಕಾರ್ಯದರ್ಶಿ ದತ್ತರಾಜ ಹೂಗಾರ, ಸಂಘಟನಾ ಕಾರ್ಯದರ್ಶಿ ಬಸವರಾಜ ಹೂಗಾರ ಕೋಟನೂರ, ತಾಲ್ಲೂಕು ಗೌರವಾಧ್ಯಕ್ಷ ದಯಾನಂದ ಹೂಗಾರ, ತಾಲ್ಲೂಕು ಅಧ್ಯಕ್ಷ ಶ್ರೀಮಂತ ಹೂಗಾರ ಸೇರಿದಂತೆ ಹಲವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.