ADVERTISEMENT

ಕಲಬುರಗಿ: ಶಾಶ್ವತ ಕುಡಿಯುವ ನೀರು ಪೂರೈಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 14 ಮೇ 2024, 15:22 IST
Last Updated 14 ಮೇ 2024, 15:22 IST
ಕಲಬುರಗಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು
ಕಲಬುರಗಿಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಬರೆದ ಮನವಿ ಪತ್ರವನ್ನು ಕಚೇರಿ ಸಿಬ್ಬಂದಿಗೆ ಸಲ್ಲಿಸಲಾಯಿತು   

ಕಲಬುರಗಿ: ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಕನ್ನಡ ಭೂಮಿ ಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳಿಕ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಮಾತನಾಡಿ, ‘ಕಳೆದ ವರ್ಷ ಮಳೆ ಅಭಾವದಿಂದ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದೆ. ಅದರಂತೆ ಮಹಾನಗರ ವ್ಯಾಪ್ತಿಗೆ ಬರುವ ವಾರ್ಡ್ ಸಂಖ್ಯೆ 48ರಲ್ಲಿ ಬರುವ ಜಯನಗರ ಸೇರಿದಂತೆ ಸುತ್ತಲಿನ ಬಡಾವಣೆಗಳಲ್ಲಿ ಕೊಳವೆ ಬಾವಿಗಳು ಬತ್ತಿ ಹೋಗಿವೆ. 10 ದಿನಕ್ಕೊಮ್ಮೆ ನಲ್ಲಿಗಳಲ್ಲಿ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಇದರಿಂದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಬಿದ್ದಾಪುರ ಕಾಲೊನಿ, ಕಪನೂರ ಎಸ್‌ಸಿ ಬಡಾವಣೆಯಲ್ಲಿ ಬಡವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದೆ. ದಿನ ನಿತ್ಯ ಕುಡಿಯುವ ನೀರಿಗಾಗಿ ಇಲ್ಲಿನ ಜನರು ಪರದಾಡುತ್ತಿದ್ದಾರೆ. ಈ ಕುರಿತು ಸ್ಥಳೀಯ ಮಹಾನಗರ ಪಾಲಿಕೆ ಸದಸ್ಯರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ನೀರು ಸರಬರಾಜು ಮಾಡಲು ಮಹಾನಗರ ಪಾಲಿಕೆಗೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಈ ವೇಳೆ ಸಂಘಟನೆಯ ನಗರ ಘಟಕದ ಅಧ್ಯಕ್ಷ ಪರಮೇಶ್ವರ ಹಡಪದ, ವಕ್ತಾರ ಆನಂದ ಕಪನೂರ, ರಾಜ್ಯ ಕಾರ್ಯದರ್ಶಿ ಗುರುಲಿಂಗಪ್ಪ ಟೆಂಗಳಿ, ನಗರ ಕಾರ್ಯದರ್ಶಿ ಅಮಿತ್ ನಾಗನಹಳ್ಳಿ, ಗುರು ಮುಕರಂಬಿ, ಸಿದ್ಧಲಿಂಗ ಗುಬ್ಬಿ, ಶಿವಕುಮಾರ ಪಾಟೀಲ, ಮಲ್ಲಯ್ಯ ಸ್ವಾಮಿ ಗಂಗಾಧರಮಠ ಸೇರಿದಂತೆ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.