ಚಿಂಚೋಳಿ: ತಾಲ್ಲೂಕಿನಲ್ಲಿ ಮೈಕ್ರೊ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು ಪೊಲೀಸರು ಸಮಗ್ರ ತನಿಖೆ ನಡೆಸಿ ಅವುಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ಉಪಾಧ್ಯಕ್ಷ ಕೆ.ಎಂ.ಬಾರಿ ಒತ್ತಾಯಿಸಿದ್ದಾರೆ.
ಇಲ್ಲಿ ‘ಪ್ರಜಾವಾಣಿ’ ಜತೆಗೆ ಮಾತನಾಡಿದ ಅವರು, ‘ಸುಲೇಪೇಟದಲ್ಲಿ ಸಲೀಂ ಎಂಬ ವ್ಯಕ್ತಿ ಸಾವಿಗೆ ಮೈಕ್ರೊ ಫೈನಾನ್ಸ್ ಕಿರುಕುಳ ಕಾರಣವೆಂದು ಕುಟುಂಬದವರು ಆರೋಪಿಸಿದ್ದಾರೆ. ಹೀಗಾಗಿ ಮೃತ ವ್ಯಕ್ತಿಯ ಸಾವಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ಪೊಲೀಸರ ಮೇಲಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.