ಕಮಲಾಪುರ: ತಾಲ್ಲೂಕಿನ ಮಹಾಗಾಂವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಸೇರಿದಂತೆ ವಿವಿಧೆಡೆ ಸರ್ಕಾರದ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಮಾಡಿದ್ದು, ಇನ್ನು ಅನೇಕ ರೈತರಿಗೆ ಹಣ ಸಂದಾಯವಾಗಿಲ್ಲ. ಕೂಡಲೇ ಬಾಕಿ ಹಣ ಪಾವತಿಸಬೇಕು ಎಂದು ಪಿಕೆಪಿಎಸ್ ಮಾಜಿ ಅಧ್ಯಕ್ಷ ಗಿರೀಶ ಪಾಟೀಲ ಆಗ್ರಹಿಸಿದ್ದಾರೆ.
ಮಹಾಗಾಂವ ಪಿಕೆಪಿಎಸ್‌ನಲ್ಲಿ ತೊಗರಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ ಶೇ 50ರಷ್ಟು ರೈತರಿಗೆ ಹಣ ಜಮೆಯಾಗಿಲ್ಲ. ಸದ್ಯ ಬಿತ್ತನೆಯ ಸಮಯ. ಜಮೀನು ಸಾಗುವಳಿಗೆ, ಬೀಜ, ಗೊಬ್ಬರ ಖರೀದಿ ಸೇರಿದಂತೆ ಇನ್ನಿತರ ಖರ್ಚಿಗೆ ಹಣದ ಅವಶ್ಯಕತೆಯಿದೆ. ಹಣ ಬಾರದಿರುವುದಕ್ಕೆ ರೈತರು ಸಾಲ ಮಾಡುತ್ತಿದ್ದಾರೆ. ಸರ್ಕಾರದ ವಿಳಂಬ ನೀತಿಯಿಂದ ರೈತರು ಬಂಡವಾಳದಾರರಿಗೆ ಬಡ್ಡಿ ತೆರಬೇಕು. ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ರೈತರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.