
ಪ್ರಜಾವಾಣಿ ವಾರ್ತೆ
ಅಫಜಲಪುರ: ತಾಲ್ಲೂಕಿನ ಮಾಶಾಳ ಗ್ರಾಮದಲ್ಲಿ ಜಿಲ್ಲಾಧಿಕಾರಿ ಅವರು ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಬೇಕು ಎಂದು ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಮಾಜಿ ನಿರ್ದೇಶಕ ಶಿವು ಪ್ಯಾಟಿ ಒತ್ತಾಯಿಸಿದ್ದಾರೆ.
ಈ ಕುರಿತು ಅವರು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿ, ‘ಮಾಶಾಳ ತಾಲ್ಲೈಕಿನಲ್ಲಿ ದೊಡ್ಡ ಗ್ರಾಮ. ಪಟ್ಟಣ ಪಂಚಾಯಿತಿಗಾಗಿ ಪ್ರಸ್ತಾವನೆ ಕಳಿಸಲಾಗಿದೆ. ಆದರೆ ನಮ್ಮ ಗ್ರಾಮಕ್ಕೆ ತೊಗರಿ ಖರೀದಿ ಕೇಂದ್ರ ಜಿಲ್ಲಾಧಿಕಾರಿ ಮಂಜೂರು ಮಾಡಿಲ್ಲ. ಇದರ ಕಾರಣ ಗೊತ್ತಾಗುತ್ತಿಲ್ಲ. ಖರೀದಿ ಕೇಂದ್ರ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗಿದೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.