ADVERTISEMENT

ದಿ. ದೇವರಾಜ ಅರಸು ಸಾಮಾಜಿಕ ಕ್ರಾಂತಿಯ ಹರಿಕಾರ

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ದಿ. ದೇವರಾಜ ಅರಸುವರ ಜನ್ಮದಿನ ಆಚರಣೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 14:11 IST
Last Updated 27 ಸೆಪ್ಟೆಂಬರ್ 2019, 14:11 IST
ಕರ್ನಾಟಕ ಕೇಂದ್ರೀಯ ವಿ.ವಿ.ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಸಿ.ಎಸ್‌.ದ್ವಾರಕಾನಾಥ್, ಪ್ರೊ.ಜಿ.ಆರ್‌.ನಾಯಕ್‌, ಮೆಹಬೂಬ್‌ ಪಾಷಾ ಕಾರಟಗಿ, ಡಾ.ಲಕ್ಷ್ಮಣ ಜಿ. ಭಾಗವಹಿಸಿದ್ದರು
ಕರ್ನಾಟಕ ಕೇಂದ್ರೀಯ ವಿ.ವಿ.ಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಸಿ.ಎಸ್‌.ದ್ವಾರಕಾನಾಥ್, ಪ್ರೊ.ಜಿ.ಆರ್‌.ನಾಯಕ್‌, ಮೆಹಬೂಬ್‌ ಪಾಷಾ ಕಾರಟಗಿ, ಡಾ.ಲಕ್ಷ್ಮಣ ಜಿ. ಭಾಗವಹಿಸಿದ್ದರು   

ಕಲಬುರ್ಗಿ: ‘ದೇವರಾಜು ಅರಸು ಅವರು ಶ್ರೇಷ್ಠ ಸಾಮಾಜಿಕ ಸುಧಾರಕ ಮತ್ತು ಮುತ್ಸದ್ದಿಯಾಗಿದ್ದು ಅವರ ಆಡಳಿತದ ಅವಧೀಯು ಭಾರತದ ಯಾವುದೇ ರಾಜ್ಯದ ಮುಖ್ಯಮಂತ್ರಿಗಿಂತಲೂ ಶ್ರೇಷ್ಠ ಸಮಾಜ ಸುಧಾರಣೆಯ ಕಾರ್ಯವನ್ನು ಜಾರಿಗೆ ತಂದಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಆರ್‌.ದ್ವಾರಕಾನಾಥ್ ಅಭಿಪ್ರಾಯಪಟ್ಟರು.

ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ದಿ. ದೇವರಾಜು ಅರಸು ಜನ್ಮದಿನಾಚರಣೆ ಮತ್ತು ಹಿಂದುಳಿದ ವರ್ಗಗಳ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಮೈಸೂರಿನ ಭಾಗದಿಂದ ಬಂದಂತಹ ಟಿಪ್ಪು ಸುಲ್ತಾನ್, ನಾಲ್ವಡಿ ಕೃಷ್ಣರಾಜ ಒಡೆಯರ ಮತ್ತು ದೇವರಾಜ ಅರಸುರವರು ಮೊದಲಿಗರಾಗಿ ಮೀಸಲಾತಿ ಪದ್ಧತಿಯನ್ನು ಜಾರಿಗೆ ತಂದವರಾಗಿದ್ದಾರೆ. ಸಾಮಾಜಿಕ ನ್ಯಾಯದ ಪರಿಕಲ್ಪನೆಗೆ ಅರಸು ಶಾಸನಾತ್ಮಕ ಮಾನ್ಯತೆಯನ್ನು ಒದಗಿಸಿಕೊಟ್ಟರು. ಅಲ್ಲದೇ, ಅತ್ಯಂತ ಹಿಂದುಳಿದ ಜನಾಂಗಗಳಿಂದ ಬಂದಂತಹ ವ್ಯಕ್ತಿಗಳನ್ನು ಗುರುತಿಸಿ ಅವರಿಗೆ ಸಮಾಜದಲ್ಲಿ ಸೂಕ್ತ ಸ್ಥಾನಮಾನ ಒದಗಿಸುವಲ್ಲಿ ಅನೇಕ ಸಲ ನಿಯಮಗಳನ್ನು ಸಡಿಲಿಸಿ ಅಂತಹ ವ್ಯಕ್ತಿಗಳಿಗೆ ಅನುಕೂಲ ಮಾಡಿ ಕೊಟ್ಟಿದ್ದರು ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಬಿಸಿಎಂ ಇಲಾಖೆ ಅಧಿಕಾರಿ ಮೆಹಬೂಬ್ ಪಾಷಾ ಕಾರಟಗಿ ಮಾತನಾಡಿ, ಅರಸು ಅವರು ಅತ್ಯಂತ ಕಡುಬಡತನದಿಂದ ಬೆಳೆದು ಬಂದು ತಮ್ಮ ಪ್ರತಿಭೆಯಿಂದ ಉನ್ನತ ಸ್ಥಾನವನ್ನು ಅಲಂಕರಿಸಿ ದೇಶಕ್ಕೆ ಕೊಡುಗೆ ನೀಡಿದ್ದಾರೆ. ಅವರು ಜೀವನ ಕುರಿತಾಗಿ ಚಲನಚಿತ್ರ ನಿರ್ಮಾಣವಾಗಬೇಕು ಮತ್ತು ಅದನ್ನು ಇವತ್ತಿನ ಯುವಕರು ನೋಡಬೇಕು ಎಂದು ಸಲಹೆ ನೀಡಿದರು.

ಸಹಾಯಕ ಪ್ರಾಧ್ಯಾಪಕ ಡಾ.ಲಕ್ಷಣ ಜಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಸಮ ಕುಲಪತಿ ಪ್ರೊ.ಜಿ.ಆರ್.‌ ನಾಯಕ್‌ ವಹಿಸಿದ್ದರು.

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದಂ, ಪರೀಕ್ಷಾಂಗ ನಿಯಂತ್ರಣಾಧಿಕಾರಿ ಪ್ರೊ.ಬಸವರಾಜ ಕೆರೂರ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ. ಚನ್ನವೀರ ಆರ್‌.ಎಂ.‌ ಉಪಸ್ಥಿತರಿದ್ದರು. ‌

ಡಾ.ಸಫಿಯಾ ಕಾರ್ಯಕ್ರಮ ನಿರೂಪಿಸಿದರು.ಅಲ್ಕಾ ಪಾಂಡಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.