ಕಲಬುರಗಿ: ‘ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಚಿತ್ತಾಪುರ ಪ್ರವಾಸಿ ಮಂದಿರದಲ್ಲಿ ದಿಗ್ಬಂಧನ ಹಾಕಿದ ಕಾಂಗ್ರೆಸ್ಸಿಗರ ದುಂಡಾವರ್ತನೆ ಸರಿಯಲ್ಲ. ಇದೇ ರೀತಿ ಮುಂದುವರಿದರೆ ಸಂಘರ್ಷಕ್ಕೆ ಪ್ರಚೋದನೆ ನೀಡುವ ಜಿಲ್ಲಾ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬಿಜೆಪಿಯಿಂದ ಘೇರಾವ್ ಹಾಕಬೇಕಾಗುತ್ತದೆ’ ಎಂದು ಬಿಜೆಪಿ ಒಬಿಸಿ ಮೋರ್ಚಾ ನಗರಾಧ್ಯಕ್ಷ ದೇವಿಂದ್ರ ದೇಸಾಯಿ ಕಲ್ಲೂರ ಎಚ್ಚರಿಸಿದ್ದಾರೆ.
‘ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸುವುದು, ಹಲ್ಲೆಗೆ ಮುಂದಾಗುವುದು, ರಾಷ್ಟ್ರ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವುದು ಕಂಡರೆ ಪೊಲೀಸರು ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಇಲ್ಲವಾದರೆ ಬಿಜೆಪಿ ಮುಖಂಡರು, ನಾಯಕರು, ಕಾರ್ಯಕರ್ತರು ಸೇರಿಕೊಂಡು ಸಚಿವರು ಕಂಡಲ್ಲಿ ಘೇರಾವ್ ಹಾಕಿ ಪ್ರತಿಭಟಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.