ADVERTISEMENT

ಧರಂ ಪುತ್ಥಳಿ, ಮ್ಯೂಸಿಯಂ ನಿರ್ಮಾಣಕ್ಕೆ ಅಡಿಗಲ್ಲು

ಜೇವರ್ಗಿಯಲ್ಲಿ ಧರ್ಮಸಿಂಗ್ 89ನೇ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 6:16 IST
Last Updated 26 ಡಿಸೆಂಬರ್ 2025, 6:16 IST
ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಹತ್ತಿರ ಮಾಜಿ ಸಿಎಂ ಧರ್ಮಸಿಂಗ್ ಅವರ ಪುತ್ಥಳಿ ಹಾಗೂ ಮ್ಯೂಸಿಯಂ ಕಟ್ಟಡ ನಿರ್ಮಾಣಕ್ಕೆ ಪ್ರಭಾವತಿ ಧರ್ಮಸಿಂಗ್ ಹಾಗೂ ಡಾ. ಅಜಯ್ ಸಿಂಗ್ ಭೂಮಿ ಪೂಜೆ ನೆರವೇರಿಸಿದರು. ವಿಜಯಸಿಂಗ್ ಇದ್ದರು
ಜೇವರ್ಗಿ ತಾಲ್ಲೂಕಿನ ಕಟ್ಟಿಸಂಗಾವಿ ಹತ್ತಿರ ಮಾಜಿ ಸಿಎಂ ಧರ್ಮಸಿಂಗ್ ಅವರ ಪುತ್ಥಳಿ ಹಾಗೂ ಮ್ಯೂಸಿಯಂ ಕಟ್ಟಡ ನಿರ್ಮಾಣಕ್ಕೆ ಪ್ರಭಾವತಿ ಧರ್ಮಸಿಂಗ್ ಹಾಗೂ ಡಾ. ಅಜಯ್ ಸಿಂಗ್ ಭೂಮಿ ಪೂಜೆ ನೆರವೇರಿಸಿದರು. ವಿಜಯಸಿಂಗ್ ಇದ್ದರು   

ಜೇವರ್ಗಿ: ತಾಲ್ಲೂಕಿನ ಕಟ್ಟಿಸಂಗಾವಿ ಹತ್ತಿರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬಳಿ ಧರ್ಮಸಿಂಗ್ ಫೌಂಡೇಶನ್ ವತಿಯಿಂದ ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಅವರ 89ನೇ ಜನ್ಮದಿನ ಆಚರಿಸಲಾಯಿತು.

ಜನ್ಮದಿನಾಚರಣೆ ನಿಮಿತ್ತ ಹಲವಾರು ಕಾರ್ಯಕ್ರಮ ಆಯೋಜಿಸಲಾಗಿತ್ತು. ಧರ್ಮಸಿಂಗ್ ಅವರ ಪುತ್ಥಳಿ ಹಾಗೂ ಮ್ಯೂಸಿಯಂ ಕಟ್ಟಡ ನಿರ್ಮಾಣಕ್ಕೆ ಪ್ರಭಾವತಿ ಧರ್ಮಸಿಂಗ್ ಅವರು ಭೂಮಿ ಪೂಜೆ ನೆರವೇರಿಸಿದರು. ಧರ್ಮಸಿಂಗ್ ಅವರ ಭಾವಚಿತ್ರಕ್ಕೆ ಕೆಕೆಆರ್‌ಡಿಬಿ ಅಧ್ಯಕ್ಷ, ಶಾಸಕ ಡಾ.ಅಜಯ್ ಸಿಂಗ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಪುಷ್ಪ ನಮನ ಸಲ್ಲಿಸಿದರು.

ಸಮಾರಂಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ ನೆಲೋಗಿ, ‘ರಾಜಕೀಯ ವಲಯದಲ್ಲಿ ಅತ್ಯಂತ ಪಾರದರ್ಶಕ ಹಾಗೂ ಆತ್ಮೀಯತೆಯನ್ನು ಮೆರೆದಂತಹ ಜನನಾಯಕ ಧರ್ಮಸಿಂಗ್ ಅವರಾಗಿದ್ದರು’ ಎಂದರು.

ADVERTISEMENT

‘ರಾಜಕಾರಣಿಗಳಲ್ಲಿ ಅತೀ ಸಂಭಾವಿತ ರಾಜಕಾರಣಿ ಅವರು. ಪದಗಳಿಗೆ ನಿಲುಕದ ಉದಾತ್ತ ವ್ಯಕ್ತಿತ್ವ ಅವರದ್ದಾಗಿತ್ತು. ಐದೂವರೆ ದಶಕಗಳ ಕಾಲದ ರಾಜಕೀಯ ಜೀವನದಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಹಾಗೂ ರಾಜ್ಯಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ’ ಎಂದು ಬಣ್ಣಿಸಿದರು.

‘ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿದ್ದ ಧರ್ಮಸಿಂಗ್ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಹೊಂದಿದ್ದ ಸ್ನೇಹ ಮತ್ತು ಒಡನಾಟ ಕೇವಲ ರಾಜ್ಯ ರಾಜಕಾರಣದಲ್ಲಿ ಮಾತ್ರವಲ್ಲ, ರಾಷ್ಟ್ರ ರಾಜಕಾರಣದ ಗಮನವನ್ನೂ ಸೆಳೆದಿತ್ತು. ಕಾಂಗ್ರೆಸ್ ಕಾರ್ಯಕರ್ತರಿಂದ ಹಿಡಿದು ಅಧಿನಾಯಕರವರೆಗೆ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದ ಧರ್ಮಸಿಂಗ್‌ ಅವರು ಪ್ರತಿ ಪಕ್ಷಗಳ ಎಲ್ಲಾ ನಾಯಕರೂ ಕೂಡಾ ಗೌರವಿಸುವ ಹಾಗೂ ಮೆಚ್ಚುವ ವ್ಯಕ್ತಿತ್ವವನ್ನು ಹೊಂದಿದ್ದರು’ ಎಂದು ಹೇಳಿದರು.

ಇದೇ ವೇಳೆ ಡಿಎಂಎಫ್ ಅನುದಾನದಡಿಯಲ್ಲಿ 120 ಜನ ಅಂಗವಿಕಲರಿಗೆ ತ್ರಿಚಕ್ರ ವಾಹನಗಳನ್ನು ಡಾ.ಅಜಯ್ ಸಿಂಗ್ ವಿತರಣೆ ಮಾಡಿದರು.

ಕಾಂಗ್ರೆಸ್ ಮುಖಂಡರಾದ ಕೃಷ್ಣಾಜಿ ಕುಲಕರ್ಣಿ, ನೀಲಕಂಠರಾವ ಮೂಲಗೆ, ಶರಣಕುಮಾರ ಮೋದಿ, ಜೇವರ್ಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದಲಿಂಗ ರೆಡ್ಡಿ ಇಟಗಿ, ರುಕುಂ ಪಟೇಲ್ ಇಜೇರಿ, ರಾಜಶೇಖರ ಸೀರಿ, ಗುರುಲಿಂಗಪ್ಪಗೌಡ ಮಾಲಿಪಾಟೀಲ, ಗೌಡಪ್ಪಗೌಡ ಪೊಲೀಸ್ ಪಾಟೀಲ, ಶಾಂತಪ್ಪ ಕೂಡಲಗಿ, ಶೌಕತ್ ಅಲಿ ಆಲೂರ, ಮಲ್ಲಿಕಾರ್ಜುನ ಹಲಕರ್ಟಿ, ಶಿವಶರಣಪ್ಪ ಕೋಬಾಳ, ವಸಂತ ನರಿಬೋಳ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಚಂದ್ರಶೇಖರ ಪುರಾಣಿಕ, ಕಾಶಿರಾಯಗೌಡ ಯಲಗೋಡ, ಗುರುರಾಜ ಸುಬೇದಾರ, ಮಲ್ಲಿಕಾರ್ಜುನ ದಿನ್ನಿ, ಶಿವಕುಮಾರ ಕಲ್ಲಾ, ನೀಲಕಂಠ ಅವಂಟಿ, ಚಂದ್ರಶೇಖರ ಹರನಾಳ, ಚಂದ್ರಶೇಖರ ಹೊಸಮನಿ, ಗುರು ಪಾಟೀಲ ನೆಲೋಗಿ, ಮರೆಪ್ಪ ಸರಡಗಿ ಸೇರಿದಂತೆ ಹಲವಾರು ಜನ ಭಾಗವಹಿಸಿದ್ದರು. 

ಜೇವರ್ಗಿ ಹಾಗೂ ಯಡ್ರಾಮಿ ತಾಲ್ಲೂಕು ಸೇರಿದಂತೆ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಯಿಂದ ಸಹಸ್ರಾರು ಜನ ಅಭಿಮಾನಿಗಳು ಪಾಲ್ಗೊಂಡಿದ್ದರು.

ಡಿಎಂಎಫ್ ಅನುದಾನದಲ್ಲಿ 120 ಜನ ಅಂಗವಿಕಲರಿಗೆ ಶಾಸಕ ಡಾ.ಅಜಯ್ ಸಿಂಗ್ ತ್ರಿಚಕ್ರ ವಾಹನ ವಿತರಣೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.