ADVERTISEMENT

ಹೆಸರು ಖರೀದಿ ಮಿತಿ ಹೆಚ್ಚಳಕ್ಕೆ ಒತ್ತಾಯ: ಕಾಂಗ್ರೆಸ್‌ನಿಂದ ಪ್ರತಿಭಟನಾ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2018, 14:43 IST
Last Updated 24 ಸೆಪ್ಟೆಂಬರ್ 2018, 14:43 IST
ಹೆಸರು ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು
ಹೆಸರು ಖರೀದಿ ಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಪ್ರತಿಭಟನಾ ರ್‍ಯಾಲಿ ನಡೆಸಿದರು   

ಕಲಬುರ್ಗಿ: ಹೆಸರು ಖರೀದಿ ಮಿತಿಯನ್ನು ಹೆಚ್ಚಿಸಬೇಕು ಮತ್ತು ಉದ್ದು ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಸೋಮವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ನಗರದ ನೆಹರೂ ಗಂಜ್‌ನ ನಗರೇಶ್ವರ ಶಾಲೆಯಿಂದ ಹೊರಟ ಮೆರವಣಿಗೆಯು ಕಿರಾಣಾ ಬಜಾರ್, ಜಗತ್ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು. ತೆರೆದ ವಾಹನದಲ್ಲಿ ಬಂದ ಮುಖಂಡರು ಹಾಗೂ ಕಾರ್ಯಕರ್ತರು, ಕೇಂದ್ರ ಸರ್ಕಾರ ರೈತ ವಿರೋಧಿ ಮತ್ತು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಘೋಷಣೆ ಕೂಗಿದರು.

ಪ್ರತಿ ರೈತನಿಂದ 10 ಕ್ವಿಂಟಲ್ ಬದಲು 4 ಕ್ವಿಂಟಲ್ ಹೆಸರು ಖರೀದಿಗೆ ಮುಂದಾಗಿರುವುದು ಖಂಡನೀಯ. ರೈತರು ಬೆಳೆದಿರುವ ಎಲ್ಲಾ ಹೆಸರು ಕಾಳು ಬೆಳೆಯನ್ನೂ ಖರೀದಿಸಬೇಕು. ಅದೇ ರೀತಿ ಉದ್ದು ಖರೀದಿ ಕೇಂದ್ರ ಪ್ರಾರಂಭಿಸಬೇಕು. ತೊಗರಿಗೆ ಕನಿಷ್ಠ ₹7,500 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಶಾಸಕ ಡಾ. ಉಮೇಶ ಜಾಧವ, ಮುಖಂಡರಾದ ಡಾ. ಶರಣಪ್ರಕಾಶ ಪಾಟೀಲ, ಬಿ.ಆರ್.ಪಾಟೀಲ, ವಿಜಯಕುಮಾರ್ ಜಿ. ರಾಮಕೃಷ್ಣ, ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ, ಮುಖಂಡ ಮಹಾಂತಪ್ಪ ಸಂಗಾವಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.