ಕಲಬುರಗಿ: ಗ್ರಾಮದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಿಳಿದುಕೊಳ್ಳಲು ಹಾಗೂ ವಿವಿಧ ಇಲಾಖೆಗಳಿಂದ ಆಗಬೇಕಿರುವ ಕೆಲಸಗಳ ಬಗ್ಗೆ ಸ್ಥಳದಲ್ಲೇ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಗ್ರಾಮವಾಸ್ತವ್ಯ ಕೈಗೊಂಡಿರುವ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರನ್ನು ಜಿಲ್ಲೆಯ ಕಾಳಗಿ ತಾಲ್ಲೂಕಿನ ಹೊಸಳ್ಳಿ (ಎಚ್) ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.
ಡೊಳ್ಳಿನ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಅವರನ್ನು ಕರೆತರಲಾಯಿತು.
ಜಿಲ್ಲಾಧಿಕಾರಿ ಜ್ಯೋತ್ಸ್ನಾಅವರೊಂದಿಗೆ ಜಿಲ್ಲಾ ಪಂಚಾಯಿತಿ ಸಿಇಓ ಡಾ. ದಿಲೀಷ್ ಶಶಿ, ಉಪವಿಭಾಗಾಧಿಕಾರಿ ಮೋನಾ ರೂಟ್ ಇದ್ದಾರೆ.
ಗ್ರಾಮ ವಾಸ್ತವ್ಯದ ಅಂಗವಾಗಿ ಆರೋಗ್ಯ ಇಲಾಖೆಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರವನ್ನು ಅಯೋಜಿಸಲಾಗಿದ್ದು, ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.