ಕಲಬುರಗಿ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಿಂದ ಹೊರ ಬಂದ ದಿವ್ಯಾ ಹಾಗರಗಿ
ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯಲ್ಲಿರುವ ಸಾಮಾಜಿಕ ಕಾರ್ಯಕರ್ತೆ ಹಾಗೂ ಪಿಎಸ್ಐ ಹಗರಣ ಪ್ರಕರಣದ ಆರೋಪಿ ದಿವ್ಯಾ ಹಾಗರಗಿ ಮನೆ ಮೇಲೆ ಕಲಬುರಗಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮನೆಯಲ್ಲಿ ಗುಂಪು ಸೇರಿಕೊಂಡು ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
'ಮನೆಯಲ್ಲೆ ಅಡ್ಡೆ ಮಾಡಿಕೊಂಡು ಇಸ್ಪೀಟ್ ಜೂಜಾಟ ನಡೆಸಲಾಗುತ್ತಿತ್ತು. ಕೆಲ ಸರ್ಕಾರಿ ಅಧಿಕಾರಿಗಳು ಸೇರಿ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳದಿಂದ ₹42 ಸಾವಿರ ಜಪ್ತಿ ಮಾಡಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ದಿವ್ಯಾ ಹಾಗರಗಿ, ರಾಜು ಲೆಂಗಟಿ, ಶಿವಶರಣಪ್ಪ ಮಶಾಳ, ರವೀಂದ್ರ ಮಾನಕರ, ಭಗವಾನ ಜಾಕೋರಿ, ಮಲ್ಲಿನಾಥ ಮಂಗಲಗಿ, ಸಂಗಮೇಶ ನಾಗನಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಈ ಜೂಜಾಟ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.