ಶಹಾಬಾದ್: ನಗರದ ಲಕ್ಷ್ಮೀ ಗಂಜ್ ನಿವಾಸಿ ಮಹಾಂತೇಶ ರೆಡ್ಡಿ ಅವರ ಮಗ ನಮನ್ (7) ಮೇಲೆ ಶನಿವಾರ ಬೀದಿ ನಾಯಿ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ.
ಮನೆ ಎದುರು ಆಟ ಆಡುತ್ತಿದ್ದ ನಮನ್ ಮೇಲೆ ಏಕಾಏಕಿ ಬೀದಿ ನಾಯಿ ದಾಳಿ ಮಾಡಿ, ತೊಡೆ ಮತ್ತು ಮೊಣಕಾಲು ಸಂಧಿ, ಬೆನ್ನಿಗೆ ಕಚ್ಚಿ ಗಾಯಗೊಳಿಸಿದೆ. ಬಾಲಕನಿಗೆ ಶಹಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.
ವೈಜ್ಞಾನಿಕ ರೀತಿಯಲ್ಲಿ ನಾಯಿಗಳ ನಿಯಂತ್ರಣ ಮಾಡುವಲ್ಲಿ ನಗರಸಭೆ ವಿಫಲವಾಗಿದೆ. ಈಗಲಾದರೂ ಎಚ್ಚೆತ್ತುಕೊಂಡು ಕ್ರಮವಹಿಸಬೇಕು ಎಂದು ಎಐಡಿವೈಒ ಜಿಲ್ಲಾ ಅಧ್ಯಕ್ಷ ಜಗನ್ನಾಥ್ ಎಸ್.ಎಚ್. ಒತ್ತಾಯಿಸಿದ್ದಾರೆ.
‘ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳ ತ್ಯಾಜ್ಯವನ್ನು ಎಸೆಯಲಾಗುತ್ತಿದೆ. ಮಾಂಸ ಸಿಗದಿದ್ದಾಗ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುತ್ತಿವೆ. ಮಾಂಸದ ತ್ಯಾಜ್ಯದ ಅಸಮರ್ಪಕ ವಿಲೇವಾರಿಯಿಂದ ಇಂಥ ಘಟನೆಗಳು ಸಂಭವಿಸುತ್ತಿವೆ’ ಎಂದು ಕಟ್ಟಡ ಕಾರ್ಮಿಕರ ಮುಖಂಡ ತಿಮ್ಮಯ್ಯ ಬಿ. ಮಾನೆ ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.