ಚಿಂಚೋಳಿ: ಆಸ್ಟ್ರೇಲಿಯಾದ ಗೋಲ್ಡ್‌ಕೋಸ್ಟ್ ನಗರದಲ್ಲಿ ಸಾವನ್ನಪ್ಪಿದ ಚಿಂಚೋಳಿ ತಾಲ್ಲೂಕಿನ ಚಿಮ್ಮನಚೋಡ ಗ್ರಾಮದ ತಜ್ಞವೈದ್ಯ ಡಾ.ರಾಹುಲ್ ಚಂದ್ರಪ್ರಕಾಶ ರಗಟೆ ಅವರ ಸಾವಿನ ಪ್ರಕರಣ ಕುರಿತು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಶನಿವಾರ ಮಾಹಿತಿ ಪಡೆದಿದ್ದಾರೆ.
‘ಪ್ರಜಾವಾಣಿ’ಯಲ್ಲಿ ಜುಲೈ 5ರ ಶನಿವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಚಿಂಚೋಳಿ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರ ಮೂಲಕ ಮಾಹಿತಿ ಪಡೆದಿದ್ದಾರೆ. ‘ಪ್ರಜಾವಾಣಿ’ ಜತೆಗೆ ಮಾತನಾಡಿ ಘಟನೆ ಕುರಿತ ಮಾಹಿತಿ ಪಡೆದ ತಹಶೀಲ್ದಾರ್, ಮೃತ ವೈದ್ಯನ ತಂದೆ ಡಾ.ಚಂದ್ರಪ್ರಕಾಶ ರಗಟೆ ಅವರಿಗೆ ಮೊಬೈಲ್ ಕರೆ ಮಾಡಿ ಮಾತನಾಡಿದ್ದಾರೆ.
ಪ್ರಸ್ತುತ ಬೀದರ್‌ನ ಶಿವನಗರದಲ್ಲಿರುವ ಡಾ.ಚಂದ್ರಪ್ರಕಾಶ ರಗಟೆ ಅವರ ಮನೆಗೆ ಭೇಟಿ ನೀಡಿ ಮಾಹಿತಿ ನೀಡುವಂತೆ ಬೀದರ್ ತಹಶೀಲ್ದಾರರಿಗೆ ಕೋರಲಾಗಿದೆ ಎಂದು ಸುಬ್ಬಣ್ಣ ಜಮಖಂಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.