ಕಲಬುರಗಿ: ಸರ್ಕಾರವು ಮನೆಯಲ್ಲಿ ಕುಳಿತು ಅತಿ ಸರಳವಾಗಿ ಇ-ಖಾತಾ ಸೇವೆಯನ್ನು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಕಾಲಾವಧಿಯಲ್ಲಿ ಖಾತಾವನ್ನು ಪಡೆಯಲು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ ಎಂದು ಕಮಲಾಪುರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಈ ಮಾಹಿತಿ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ಪಟ್ಟಣ ಪಂಚಾಯಿತಿ ಪರಿಶೀಲಿಸಿ ಅನುಮೋದಿಸಲಾಗುತ್ತದೆ. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಯಲ್ಲಿ ಕುಳಿತು ಪಡೆಯಬಹುದಾಗಿದೆ. ಮಾಹಿತಿಗಾಗಿ ಮೊ. 8660205472, 9663143400, 8120806378, 8105085606 ಅಥವಾ www.eaasthi.karnataka.gov.in ವೆಬ್‍ಸೈಟ್ ಸಂಪರ್ಕಿಸಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.