
ಪ್ರಜಾವಾಣಿ ವಾರ್ತೆ
ಕಲಬುರಗಿ: ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಸಾಪುರ ಗ್ರಾಮದಿಂದ 1.7 ಕಿ.ಮೀ ದೂರದಲ್ಲಿ ಶನಿವಾರ ಬೆಳಿಗ್ಗೆ 10.13ಕ್ಕೆ ಭೂಕಂಪನ ಆಗಿರುವ ಬಗ್ಗೆ ವರದಿಯಾಗಿದೆ.
ರಿಕ್ಟರ್ ಮಾಪನದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ. ತೀವ್ರತೆ ಕಡಿಮೆ ಇರುವ ಕಾರಣ ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅಗತ್ಯ ಇಲ್ಲ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.