
ಕಲಬುರಗಿ: 'ಪ್ರಜಾವಾಣಿ' ಹಾಗೂ 'ಡೆಕ್ಕನ್ ಹೆರಾಲ್ಡ್' ಪತ್ರಿಕಾ ಬಳಗವು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ನಗರದ ಎಸ್. ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಿರುವ 'ಜ್ಞಾನ ದೇಗುಲ' ಶೈಕ್ಷಣಿಕ ಮೇಳ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.
ಬೆಳಿಗ್ಗೆ 9 ಗಂಟೆಯಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ವಿವಿಧ ಶೈಕ್ಷಣಿಕ ಸಂಸ್ಥೆಗಳ ನೂರಾರು ವಿದ್ಯಾರ್ಥಿಗಳು ಮೇಳದತ್ತ ಹರಿದು ಬರುತ್ತಿದ್ದಾರೆ.
ಈ ಮೇಳದಲ್ಲಿ ಪಿಯುಸಿ ನಂತರ ತಾಂತ್ರಿಕ, ವೈದ್ಯಕೀಯ ಸೇರಿ ಯಾವೆಲ್ಲ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಬಹುದು? ಸಿಇಟಿ, ನೀಟ್ ಪರೀಕ್ಷೆಗೆ ಹೇಗೆ ತಯಾರಿ ಮಾಡಿಕೊಳ್ಳಬಹುದು ಎಂಬ ಬಗ್ಗೆ ತಜ್ಞ ಸಂಪನ್ಮೂಲ ವ್ಯಕ್ತಿಗಳು ಮಾರ್ಗದರ್ಶನ ನೀಡಲಿದ್ದಾರೆ.
ಮೇಳದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕೆಕೆಆರ್‌ಡಿಬಿ ಕಾರ್ಯದರ್ಶಿ ನಲಿನ್ ಅತುಲ್, ಅತಿಥಿಗಳಾಗಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಡಾ.ಮಹೇಶ ಪಾಟೀಲ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುರೇಶ ಅಕ್ಕಣ್ಣ ಪಾಲ್ಗೊಳ್ಳಲಿದ್ದಾರೆ.
ಸಿಇಟಿ ಕುರಿತು ವಿಟಿಯು ಪ್ರಾದೇಶಿಕ ಕೇಂದ್ರದ ಸಹಪ್ರಾಧ್ಯಾಪಕ ಡಾ.ಬಿ.ಶಂಭುಲಿಂಗಪ್ಪ, ನೀಟ್ ಕುರಿತು ವಿದ್ಯಾನಿಧಿ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರಗಿರೀಶ್ ಉಪನ್ಯಾಸ ನೀಡಲಿದ್ದಾರೆ.
ನವೋದಯ ವೈದ್ಯಕೀಯ ಕಾಲೇಜು, ಭೀಮಣ್ಣಖಂಡ್ರೆ ಎಂಜಿನಿಯರಿಂಗ್ ಕಾಲೇಜು 'ಗೋಲ್ಡ್' ಪ್ರಾಯೋಜಕತ್ವವನ್ನು ವಹಿಸಿಕೊಂಡಿವೆ.
ಶಾಹೀನ್ ಶೈಕ್ಷಣಿಕ ಸಮೂಹಗಳು, ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾಲಯ, ಸಮತಾ ಲೋಕ ಶಿಕ್ಷಣ ಸಮಿತಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಎಸ್.ಡಿ.ಎಂ ಎಂಜಿನಿಯರಿಂಗ್ ಹಾಗೂ ತಾಂತ್ರಿಕ ಕಾಲೇಜು, ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜು. ಗಾರ್ಡನ್ ಸಿಟಿ ವಿಶ್ವವಿದ್ಯಾಲಯ 'ಸಿಲ್ವರ್' ಪ್ರಾಯೋಜಕತ್ವ ವಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.