ADVERTISEMENT

ಯಲಬುರ್ಗಾ | ಈದ್‌ ಉಲ್‌ ಫಿತ್ರ್‌: ಮುಸ್ಲಿಮರಿಂದ ಸಾಮೂಹಿಕ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:36 IST
Last Updated 11 ಏಪ್ರಿಲ್ 2024, 15:36 IST
ಯಲಬುರ್ಗಾ ತಾಲ್ಲೂಕು ಮಾಟಲದಿನ್ನಿ ಗ್ರಾಮದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಗುರುವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಯಲಬುರ್ಗಾ ತಾಲ್ಲೂಕು ಮಾಟಲದಿನ್ನಿ ಗ್ರಾಮದ ಹೊರವಲಯದಲ್ಲಿರುವ ಈದ್ಗಾ ಮೈದಾನದಲ್ಲಿ ಗುರುವಾರ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು    

ಯಲಬುರ್ಗಾ: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರಂಜಾನ್ ಆಚರಣೆ ಪ್ರಯುಕ್ತ ಮುಸ್ಲಿಮರು ಈದ್ಗಾ ಮೈದಾನದಲ್ಲಿ ಗುರುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಶುಭಾಶಯ ಕೋರಿದರು.

ಪಟ್ಟಣದ ತೆಗ್ಗೆದಾರ ಮಸೀದಿಯಿಂದ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಮರು ವಿವಿಧ ಬೀದಿಗಳಲ್ಲಿ ಮೆರವಣಿಗೆ ಹೊರಟು ಮುಧೋಳ ರಸ್ತೆಯಲ್ಲಿರುವ ಮೈದಾನಕ್ಕೆ ತೆರಳಿದರು. ಧರ್ಮಗುರು ಮಾತನಾಡಿದರು. ನಂತರ ಪ್ರಾರ್ಥಿಸಿದರು.

ತಾಲ್ಲೂಕಿನ ಹಿರೇವಂಕಲಕುಂಟಾ, ಮಾಟಲದಿನ್ನಿ, ಸಂಕನೂರು, ಮುಧೋಳ ಗ್ರಾಮದಲ್ಲಿಯೂ ಕೂಡಾ ಮುಸ್ಲಿಮರು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸುತ್ತಮುತ್ತಲಿನ ವಿವಿಧ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಪ್ರಾರ್ಥಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.