ADVERTISEMENT

ಕಲಬುರಗಿ: ಎಸ್‌ಬಿಐ ಎಟಿಎಂ ಯಂತ್ರ ಧ್ವಂಸಗೊಳಿಸಿ ₹ 18 ಲಕ್ಷ ದರೋಡೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 8:26 IST
Last Updated 9 ಏಪ್ರಿಲ್ 2025, 8:26 IST
   

ಕಲಬುರಗಿ: ನಗರದ ರಿಂಗ್ ರಸ್ತೆಯ ರಾಮನಗರದಲ್ಲಿನ ಎಸ್‌ಬಿಐ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ ದರೋಡೆಕೋರರು ಎಟಿಎಂ ಯಂತ್ರವನ್ನು ಧ್ವಂಸ ಮಾಡಿ ₹ 18 ಲಕ್ಷ ದರೋಡೆ ಮಾಡಿದ್ದಾರೆ.

ದರೋಡೆಕೋರರು ಬುಧವಾರ ನಸುಕಿನ ಜಾವ 4 ಗಂಟೆಯ ಸುಮಾರಿಗೆ ಕಾರಿನಲ್ಲಿ ಎಟಿಎಂ ಬಳಿಗೆ ಬಂದಿದ್ದಾರೆ. ಎಟಿಎಂನ ಸಿಸಿಟಿವಿ ಕ್ಯಾಮೆರಾಗಳಿಗೆ ಕಪ್ಪು ಸ್ಪ್ರೇ ಮಾಡಿ ಹಣ ದರೋಡೆ ಮಾಡಿದ್ದಾರೆ. ಆರೋಪಿಗಳ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಗ್ಯಾಸ್‌ ಕಟರ್‌ನಿಂದ ಧ್ವಂಸ: 'ಕಾರಿನಲ್ಲಿ ಬಂದಿದ್ದ ಕಳ್ಳರು ಎಟಿಎಂ ಕೇಂದ್ರಗಳ ಒಳಗಿನ ಸಿಸಿಟಿವಿ ಕ್ಯಾಮೆರಾ, ಎಟಿಎಂ ಮೇಲಿನ ಕ್ಯಾಮೆರಾಗಳಿಗೂ ಕಪ್ಪು ಸ್ಪ್ರೇ ಮಾಡಿದ್ದಾರೆ. ಬಳಿಕ ಗ್ಯಾಸ್ ಕಟರ್‌ ಬಳಸಿ ಎಟಿಎಂ ಯಂತ್ರದ ಕ್ಯಾಶ್ ಬಾಕ್ಸ್ ತೆರೆದು, ಅದರಲ್ಲಿದ್ದ ₹ 18 ಲಕ್ಷ ದೋಚಿ ಪರಾರಿ ಆಗಿದ್ದಾರೆ' ಎಂದು ತಿಳಿಸಿದ್ದಾರೆ.

ADVERTISEMENT

'ಬ್ಯಾಂಕ್ ಸಿಬ್ಬಂದಿ ಮಂಗಳವಾರ ಸಂಜೆ 6ರ ಸುಮಾರಿಗೆ ಎಟಿಎಂ ಯಂತ್ರದಲ್ಲಿ ಹಣ ಹಾಕಿದ್ದರು. ಮರುದಿನ ನಸುಕಿನ‌ ಜಾವದಲ್ಲಿ ದರೋಡೆಯಾಗಿದೆ' ಎಂದಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಬರ್ಬನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.