ಯಡ್ರಾಮಿ: ಕಲಬುರಗಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಗೆಲವು ನಿಶ್ಚಿತವಾಗಿದೆ ಎಂದು ಕಾಂಗ್ರೆಸ್ ಮುಖಂಡ ವಿಶ್ವರಾಧ್ಯ ದಳವಾಯಿ ಸುಂಬಡ ಅವರು ತಾಲ್ಲೂಕಿನ ಸುಂಬಡ ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಿಸಿ ಮತಯಾಚನೆ ಮಾಡಿದರು.
ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಯಶಸ್ವಿಯಾಗಿ ಪ್ರತಿಯೊಬ್ಬ ಮತದಾರರ ಮನೆ ಮಾತಾಗಿವೆ. ಜನಸಾಮಾನ್ಯರು ಇದರಿಂದ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ಈಗ ರಾಷ್ಟ್ರ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆ ವಿತರಣೆಯಿಂದ ಪ್ರತಿಯೊಂದು ಕುಟುಂಬಕ್ಕೂ ಅನುಕೂಲವಾಗುತ್ತದೆ. ಈಗ ರಾಜ್ಯದಲ್ಲಿ ಗ್ಯಾರಂಟಿ ಕಾರ್ಡ್ ಅನುಕೂಲವಾಗಿದೆ ಎಂದರು.
ನಬಿರಸೂಲ್ ಬಡಿಗೇರ, ಸಿದ್ರಾಮ ಪೂಜಾರಿ, ಭೀಮರಾಯ ಗುಡಿಮನಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.